ಶಾಲೆಯಲ್ಲಿ ಶಿಕ್ಷಕರ ಮೊಬೈಲ್ ಫೋನ್ ಬಳಕೆ ನಿಷೇಧಕ್ಕೆ ನಿರ್ಧಾರ
ಬೆಂಗಳೂರು, ಜೂನ್ 1: ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಕೆಲಸ ಮಾಡುವ ಸಮಯದಲ್ಲಿ ಮೊಬೈಲ್ ಬಳಸದಂತೆ ಕಠಿಣ ನಿರ್ಣಯವನ್ನು ಕರ್ನಾಟಕ ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಅಕಸ್ಮಾತ್ ಯಾವುದೇ ಶಿಕ್ಷಕರು ಶಾಲೆಯಲ್ಲಿ ಮೊಬೈಲ್ ಫೋನ್ ಬಳಸುವುದು ಕಂಡುಬಂದರೆ ಅದಕ್ಕೆ ಆ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಯಾಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಲಸ ಮಾಡುವ ಸ್ಥಳಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂಬ ಮಾತು ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ನಿರ್ಧಾರ ಖಾಸಗಿ ಶಾಲೆಗಳಿಗೂ ಅನ್ವಯಿಸುತ್ತದೆ. ಮೇ 9 ರಂದೇ ಈ ಕುರಿತು ಚರ್ಚೆ ನಡೆದಿತ್ತಾದರೂ ಆ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಿಗೆ ಈ ನಿರ್ಣಯ ಅನ್ವಯವಾಗುವುದಿಲ್ಲ ಎನ್ನಲಾಗಿತ್ತು. ಆದರೆ ಹೊಸ ನಿರ್ಣಯದ ಪ್ರಕಾರ ಎಲ್ಲರಿಗೂ ಇದು ಅನ್ವಯವಾಗುತ್ತದೆ.
ಅಕಸ್ಮಾತ್ ಯಾವುದೇ ತುರ್ತು ಸಂದರ್ಭವಿದ್ದರೆ ಶಾಲೆಯ ಲ್ಯಾಂಡ್ ಲೈನ್ ಫೋನ್ ಮೂಲಕ ಕರೆ ಮಾಡಬಹುದಾಗಿದೆ.












Click it and Unblock the Notifications