Ration Card Cancellation: ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ? ಕಾರಣಗಳೇನು ತಿಳಿಯಿರಿ
Ration Card Cancellation: ಇದೀಗ ರಾಜ್ಯದಲ್ಲಿ ಅನರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರೆಸಿದೆ. ಹಾಗಾದ್ರೆ, ಬಿಪಿಎಲ್ ಪಡಿತರ ಚೀಟಿ ರದ್ದಾಗಲು ಪ್ರಮುಖ ಕಾರಣಗಳು ಏನು ಎನ್ನುವ ಗೊಂದಲ ಬಹುತೇಕ ಮಂದಿ ತಲೆಯಲ್ಲಿ ಇರುತ್ತದೆ. ಹಾಗಾದ್ರೆ, ಅದಕ್ಕೆಲ್ಲ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಬಿಪಿಎಲ್ ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಈ ಕಾರ್ಡ್ ಪಡೆದು ಅರ್ಹರ ಅನ್ನವನ್ನು ಕಿತ್ತುಕೊಳ್ಳುವ ಕೆಲಸ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಯಾರೆಲ್ಲಾ ಅನರ್ಹರ ಬಳಿ ಬಿಪಿಎಲ್ ಕಾರ್ಡ್‌ಗಳಿವೆಯೋ ಅವುಗಳನ್ನು ಪರಿಶೀಲನೆ ನಡೆಸಿದ ಬಳಿಕ ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡುತ್ತಿದೆ.

ರಾಜ್ಯಾದ್ಯಂತ ಈಗಾಗಲೇ ಅನರ್ಹ ಬಿಪಿಎಲ್ ಪಡಿತರ ಚೀಟಿದಾರನ್ನು ಪಟ್ಟಿ ಮಾಡಿ ಇಂತಹ ಕಾರ್ಡದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಇದಕ್ಕಾಗಿ ಆಹಾರ ಇಲಾಖೆಯಿಂದ ಏನಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ ಎನ್ನುವ ಪ್ರಶ್ನೆ ಬಹುತೇಕ ಮಂದಿಯಲ್ಲಿರುತ್ತದೆ. ಇದಕ್ಕೆಲ್ಲ ಉತ್ತರ ಇಲ್ಲಿದೆ ನೋಡಿ.
ಯಾರೆಲ್ಲಾ ಬಿಪಿಎಲ್ ಕಾರ್ಡ್‌ಗೆ ಅನರ್ಹರು?
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಗಿಂತ ಹೆಚ್ಚಿರುವವರು
* ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರು
* ಆದಾಯ ತೆರಿಗೆ ಪಾವತಿಸುವವರು
* 3 ಹೆಕ್ಟೇರ್‌ಗೂ ಅಧಿಕ ಭೂಮಿ ಹೊಂದಿರುವವರು
* ನಗರ ಪ್ರದೇಶಗಳಲ್ಲಿ1,000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು
* ಸರ್ಕಾರಿ, ದೊಡ್ಡ ಕಂಪನಿಗಳಲ್ಲಿ ಉದ್ಯೋಗದಲ್ಲಿ ಇರುವವರು
ಬಿಪಿಎಲ್ ಪಡಿತರ ಚೀಟಿಯಡಿಯಲ್ಲಿ ಉಚಿತ ಪಡಿತರ ಅಷ್ಟೇ ಅಲ್ಲದೆ, ಹಲವು ಸರ್ಕಾರಿ ಸೌಲಭ್ಯವನ್ನು ಪಡೆಯಬಹುದು. ಆದ್ದರಿಂದ ರಾಜ್ಯದಲ್ಲಿ ಇದನ್ನು ನಕಲಿ ದಾಖಲೆ ಸೃಷ್ಟಿಸಿ ಪಡೆದುಕೊಂಡಿದ್ದಾರೆ. ಈ ಮೂಲಕ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲಿದ್ದವು.
ಬಡವರಿಗೆ ಸೇರಬೇಕಾದ ಸರ್ಕಾರಿ ಸೌಲಭ್ಯಗಳು ಶ್ರೀಮಂತರು ಅಂದರೆ ಉಳ್ಳವರ ಪಾಲಾಗುತ್ತಿವೆ. ಇದರಿಂದ ಬಡವರ ಹೊಟ್ಟೆಗೆ ಕಲ್ಲಾಕಿದಂತಾಗಿದೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ನಕಲಿ ಬಿಪಿಎಲ್ ಪಡಿತರ ಚೀಟಿದಾರರ ವಿರುದ್ಧ ಸಮರ ಸಾರಿದೆ. ಪರಿಶೀಲನೆ ನಡೆಸಿದ ಬಳಿಕ ಅನರ್ಹರೆಂದು ಕಂಡುಬಂದಲ್ಲಿ ಅಂತಹವರ ಬಳಿಯ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡುವ ಮಹತ್ವದ ಕೆಲಸವನ್ನು ಮುಂದುವರೆಸಿದೆ.
ರಾಜ್ಯದಲ್ಲಿ ತುಂಬಾ ಜನ ಅನರ್ಹರು ಬಿಪಿಎಲ್ ಕಾರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದು, ಇಂತಹವರಿಗೆ ತಕ್ಕ ಪಾಠ ಕಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಉದಾಹರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆಯನ್ನು ಅರ್ಹರಲ್ಲದವರು ಕೂಡ ಪಡೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಸರ್ಕಾರ ಹೊಸ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಿ ನಕಲಿಗಳನ್ನು ಜಾಲಾಡುವ ಕೆಲಸವನ್ನು ಮುಂದುವರೆಸಿದೆ. ಪರಿಶೀಲನೆ ಬಳಿಕ ಅರ್ಹರು ಹೊಸ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಂತಲೂ ಸರ್ಕಾರ ತಿಳಿಸಿದೆ. ಒಂದು ವೇಳೆ ಮಾರ್ಗಸೂಚಿ ಪ್ರಕಾರ, ಅರ್ಹರಿದ್ದರು ಸಹ ಕಾರ್ಡ ರದ್ದಾಗಿದ್ದರೆ, ನಿಮ್ಮ ತಾಲ್ಲೂಕಿನ ಆಹಾರ ಇಲಾಖೆಯ ಕಚೇರಿಗೆ ಭೇಟಿ ನಿಡಿ ಮರು ಪರಿಶೀಲನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.












Click it and Unblock the Notifications