Breaking: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 7 ರೂ ಇಳಿಕೆ
ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಈ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ 5 ರೂ, ಹಾಗೂ ಡೀಸೆಲ್ ಮೇಲೆ 10 ರೂ.ಇಳಿಕೆ ಮಾಡಿದೆ.
ನವೆಂಬರ್ 04ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆ ಆಗಲಿದೆ. ಗ್ರಾಹಕರ ಹಿತ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡುವಂತೆ ರಾಜ್ಯಗಳನ್ನು ಒತ್ತಾಯಿಸಲಾಗುತ್ತಿದೆ.
ಕಳೆದ ಕೆಲವು ತಿಂಗಳುಗಳಿಂದ ಪ್ರತಿ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಕಳೆದ 36 ದಿನಗಳಲ್ಲಿ 28 ರೂಪಾಯಿ ಏರಿಕೆಯಾಗಿದೆ. ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ನವೆಂಬರ್ 3ರಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ. ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 7 ರೂ ಇಳಿಕೆ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ.