Power tariff in Karnataka : ಹೊಸ ವರ್ಷಕ್ಕೆ ಇಂಧನ ಇಲಾಖೆಯಿಂದ ಗುಡ್ ನ್ಯೂಸ್; ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ
ಬೆಂಗಳೂರು, ಡಿಸೆಂಬರ್ 29: 2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಆಡಳಿತ ಹಾಗೂ ವಿರೋಧ ಪಕ್ಷಗಳು ಭರ್ಜರಿ ತಯಾರಿಯನ್ನ ನಡೆಸುತ್ತಿದ್ದು, ಇಷ್ಟು ದಿನ ಜನರಿಗೆ ಅಗತ್ಯ ವಸ್ತುಗಳು, ತೈಲ ಬೆಲೆಗಳು ಸೇರಿದಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಹೆಚ್ಚಿಗೆ ಮಾಡಲಾಗಿದ್ದು, ಇದೀಗ 2023 ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ಜನರ ಬಿಜೆಪಿಯತ್ತ ಸೆಳೆಯುವ ನಿಟ್ಟಿನಲ್ಲಿ ಹಲವಾರು ಜನಪರ ಯೋಜನೆಗಳಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಾರ್ವಜನಿಕರು ಎಷ್ಟೋ ಆಕ್ರೋಶ ವ್ಯಕ್ತಪಡಿಸಿದ್ದರೂ ಸುಮ್ಮನಿದ್ದ ರಾಜ್ಯ ಸರ್ಕಾರ, ಚುನಾವಣೆ ಹೊಸ್ತಿಲಲ್ಲಿ ಇಂಧನ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
— Sunil Kumar Karkala (@karkalasunil) December 29, 2022
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka
ಇನ್ನೂ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಇಂಧನ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇನ್ನೂ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.












Click it and Unblock the Notifications