BPL Card: ರಾಜ್ಯಾದ್ಯಂತ ಇಷ್ಟು ಬಿಪಿಎಲ್ ಕಾರ್ಡ್‌ಗಳ ರದ್ದು ಮಾಡಲು ಸರ್ಕಾರ ನಿರ್ಧಾರ
BPL Ration Card: ಮೊದಲಿನಿಂದಲೂ ಅರ್ಹರಿಗಿಂತಲೂ ಅನರ್ಹರೇ ಹೆಚ್ಚಾಗಿ ಬಿಪಿಎಲ್ ಕಾರ್ಡ್‌ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಇದರಿಂದ ಬಡವರಿಗೆ ಅನ್ಯಾಯವಾಗುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ನಕಲಿ ದಾಖಲೆ ಮೂಲಕ ಪಡೆದಿರುವ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ. ಹಾಗಾದರೆ ಇಡೀ ರಾಜ್ಯದಲ್ಲಿ ಎಷ್ಟು ಕಾರ್ಡ್‌ಗಳು ರದ್ದು ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ರಾಜ್ಯಾದ್ಯಂತ ಅನಧಿಕೃವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪತ್ತೆಗೆ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಖಾಸಗಿ ಸಂಸ್ಥೆ ಕಡೆಯಿಂದ ಸರ್ವೆ ನಡೆಸಲು ಮುಂದಾಗಿದೆ. ಇನ್ನು ಮುಲಗಳಿಮದ ತಿಳಿದುಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 20,00,000ಕ್ಕೂ ಹೆಚ್ಚು ನಕಲಿ ದಾಖಲಿ ನೀಡಿ ಪಡೆದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಎಲ್ಲೆಲ್ಲಿ ಎಷ್ಟು ರೇಷನ್ ಕಾರ್ಡ್‌ಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇದೀಗ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಪ್ರಕಾರ, ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್‌ಗಳಿರಬೇಕು. ಆದರೆ ಸದ್ಯ 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳ ವಿತರಣೆಯಾಗಿದೆ. ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್‌ಗಳುವೆ. ದಿನದಿಂದ ದಿನಕ್ಕೆ ಅನಧಿಕೃತ ಕಾರ್ಡ್‌ದಾರರ ಸಂಖ್ಯೆ ಹೆಚ್ಚಾಗುತ್ತಲಿದ್ದು, ಈ ಬಗ್ಗೆ ಸರ್ವೆ ಮಾಡಲು ಖಾಸಗಿ ಕಂಪನಿಯೊಂದಕ್ಕೆ ಆಹಾರ ಇಲಾಖೆಯು ಜವಾಬ್ದಾರಿ ವಹಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಕಲಿ ಬಿಪಿಲ್ ಕಾರ್ಡ್‌ದಾರಿಂದ ಸರ್ಕಾರದ ಗ್ಯಾರಂಟಿಗಳ ಮೇಲೆ ಹೊರೆ ಬೀಳುತ್ತಿದೆ ಹಾಗೂ ಇದರಿಂದ ಬಡವರು ಕೂಡ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಚಿವರು ಇತ್ತೀಚೆಗಷ್ಟೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದರು. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಕಲಿ ದಾಖಲೆ ನೀಡಿ ಪಡೆದಿರುವ ಕಾರ್ಡ್‌ಗಳನ್ನು ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಹೀಗೆ ಅನಧಿಕೃತ ಕಾರ್ಡ್‌ದಾರರನ್ನು ಗುರುತಿಸಿದರೆ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ವೆಚ್ಚವನ್ನು ಕಡಿಮೆ ಮಾಡಬಹುದು ಎನ್ನುವುದು ಸರ್ಕಾರದ ಪ್ಲ್ಯಾನ್ ಆಗಿದೆ. ಇನ್ನು ಆಹಾರ ಇಲಾಖೆಯು ಅನ್ನಭಾಗ್ಯ ಯೋಜನೆಯಡಿ ಅನಗತ್ಯವಾಗಿ ಖರ್ಚಾಗುತ್ತಿರುವ ಹಣ ಉಳಿಸಲು ಈ ಮೂಲಕ ಮುಂದಾಗಿದೆ ಎನ್ನಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವವರು ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆ ಸೂಚಿಸಿತ್ತು. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯ ಆಗಿರುತ್ತದೆ.
ಯಾರೆಲ್ಲ ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಕೆ-ವೈಸಿ ಮಾಡಿಸಿರುವುದಿಲ್ಲವೋ ಅಂತಹ ಕುಟುಂಬಗಳ ಪಟ್ಟಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಪ್ರದರ್ಶಿಸಲಾಗಿದೆ. ಶೀಘ್ರದಲ್ಲಿಯೇ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲು ಕ್ರಮವಹಿಸಲಾಗುವುದು ಅಂತಲೂ ತಿಳಿಸಿದೆ.












Click it and Unblock the Notifications