ಸೆ. 5ರಿಂದ ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು, ಸೆಪ್ಟೆಂಬರ್ 09: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

Recommended Video

      Congress ನಾಯಕರ ಜೊತೆ Ragini ಹಾಗು Sanjjanaa - BJP tweet | Oneindia Kannada

      ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ.

      ತಮ್ಮ ವಿವಿಧ ಬೇಡಿಕೆಗಳನ್ನು ಒಂದು ವಾರದಲ್ಲಿ ಈಡೇರಿಸದಿದ್ದರೆ ಸೆ.15ರ ಬಳಿಕ ಹಂತ ಹಂತವಾಗಿ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಮುಷ್ಕರ ಆರಂಭಿಸಿದರೆ ಜನರಿಗೆ ತೊಂದರೆಯಾಗಲಿದೆ.

      Karnataka Government Doctors To Go On Strike From Sep 15

      ಸರ್ಕಾರಿ ಗುತ್ತಿಗೆ ನೌಕರರು ಮತ್ತು ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಆಗ ಸರ್ಕಾರಿ ವೈದ್ಯರು ಸಹ ವೇತನ ಹೆಚ್ಚಳ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.

      ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ಸರ್ಕಾರಿ ವೈದ್ಯರು ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆಗ ಸರ್ಕಾರ ಭರವಸೆ ನೀಡಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ.

      ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 15ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+