Government Employeel: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ತೀರ್ಮಾನ
ಬೆಂಗಳೂರು, ಜೂನ್ 05; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. 2024-2029ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿಯನ್ನು ಹೊರತುಪಡಿಸಿ, ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ಸಂಘದ ಬೈಲಾ ನಿಯಮದನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದೊಳಗೆ ಸಿದ್ಧಪಡಿಸಿ ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸತಕ್ಕದ್ದು.
ಕರಡು ಮತದಾರರ ಪಟ್ಟಿಯನ್ನು ಹೊರಡಿಸಿದ ನಂತರ ಸಂಘದ ಸದಸ್ಯರಿಂದ ಮನವಿ/ ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ನೀಡುವುದು ಹಾಗೂ ಈ ಕುರಿತು ವ್ಯಾಪಕ ಪ್ರಚುರಪಡಿಸತಕ್ಕದ್ದು.
ಯಾವುದೇ ಕಾರಣಕ್ಕೂ ನಿಗದಿತ ಅವಧಿಯ ವಿಸ್ತರಣೆಗೆ ಅವಕಾಶವಿರುವುದಿಲ್ಲ ತಪ್ಪಿದಲ್ಲಿ ಸಂಬಂಧಿಸಿದ ಶಾಖೆಗಳೇ ಹೊಣೆಯಾಗತಕ್ಕದ್ದು. ಈ ಸಂಬಂಧ ತಮ್ಮ ಶಾಖೆಗಳಲ್ಲಿ ಕಾರ್ಯಕಾರಿ ಸಮಿತಿ ಸಭೆಗಳನ್ನು ಸಂಘದ ಬೈಲಾ ರೀತ್ಯಾ ನಡೆಸಿ ಕ್ರಮ ಕೈಗೊಳ್ಳಬೇಕು.
ಮತದಾರರ ಪಟ್ಟಿ ಪರಿಷ್ಕರಣೆಗೆ ನೋಂದಣಿ
* ತಾಲೂಕು ಶಾಖೆಗಳ ಮತ ಕ್ಷೇತ್ರಗಳು ದಿನಾಂಕ 8/6/2024 ರಿಂದ 30/6/2024ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ 1/7/2024. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ 2/7/2024 ರಿಂದ 10/7/2024 ಆಗಿದೆ.
* ಯೋಜನಾ ಶಾಖೆಗಳ ಮತಕ್ಷೇತ್ರಗಳು ದಿನಾಂಕ 8/6/2024 ರಿಂದ 30/6/2024 ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ 1/7/2024. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ 2/7/2024 ರಿಂದ 10/7/2024 ಆಗಿದೆ.
* ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು ದಿನಾಂಕ 8/6/2024 ರಿಂದ 30/6/2024ರ ತನಕ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ 1/7/2024. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ 2/7/2024 ರಿಂದ 10/7/2024.
* ಬೆಂಗಳೂರು ನಗರ ರಾಜ್ಯ ಪರಿಷತ್ ಮತ ಕ್ಷೇತ್ರಗಳು 8/6/2024 ರಿಂದ 30/6/2024ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ 1/7/2024. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ 2/7/2024 ರಿಂದ 10/7/2024 ಆಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications