Government Employee: ಡಿ. 8ಕ್ಕೆ ಕರ್ನಾಟಕದ ಸರ್ಕಾರಿ ನೌಕರರ ಮಹತ್ವದ ಸಭೆ
ಬೆಂಗಳೂರು, ಡಿಸೆಂಬರ್ 07: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಡಿಸೆಂಬರ್ 8ರ ಭಾನುವಾರ ಮಹತ್ವದ ಸಭೆಯನ್ನು ಕರೆದಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮುಂದಿನ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಆಯ್ಕೆಗೆ ನಡೆಯುವ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ತಾಲೂಕು, ಜಿಲ್ಲಾ ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿಗಳ ಆಯ್ಕೆಗೆ ಡಿಸೆಂಬರ್ 27ರಂದು ಮತದಾನ ನಡೆಯಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಸ್ಥಾನದ ಚುನಾವಣೆ ವೇಳಾಪಟ್ಟಿ ಈಗಾಗಲೇ ಘೋಷಣೆಯಾಗಿದೆ. ಡಿಸೆಂಬರ್ 9ರ ಸೋಮವಾರದಿಂದ ಡಿಸೆಂಬರ್ 18ರ ತನಕ ನಾಮಪತ್ರಗಳನ್ನು ಅಭ್ಯರ್ಥಿಗಳು ಸಲ್ಲಿಕೆ ಮಾಡಬಹುದು.

ಮಹತ್ವದ ಸಭೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮಾಲೋಚನಾ ಸಭೆಯನ್ನು ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ಕರೆಯಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಜಿಲ್ಲೆ, ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್‌ಗೆ ಆಯ್ಕೆಯಾದ ನೂತನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದೆ.
ಮುಂದಿನ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಅಭ್ಯರ್ಥಿಗಳ ಆಯ್ಕೆಯ ಸಮಾಲೋಚನಾ ಸಭೆ ಡಿಸೆಂಬರ್ 8ರ ಭಾನುವಾರ ಸಂಜೆ 5.30ಕ್ಕೆ ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆಯಲಿದೆ. ಬನ್ನಿ... ಸಧೃಡ ಸಂಘಟನೆಗೆ ಸಮರ್ಥ ನಾಯಕರ ಆಯ್ಕೆ ಮಾಡೋಣ ಎಂದು ಆಹ್ವಾನ ನೀಡಲಾಗಿದೆ.
ಸೋಮವಾರ ನಾಮಪತ್ರ ಸಲ್ಲಿಕೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮುಂದಿನ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಹುದ್ದೆಗಳ ಆಯ್ಕೆಯ ಕುರಿತು ಡಿಸೆಂಬರ್ 8ರ ಸಮಾಲೋಚನೆ ಸಭೆಯ ನಿರ್ಣಯದಂತೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯವು
ದಿನಾಂಕ 09-12-2024ರ ಬೆಳಗ್ಗೆ 11.30ಗಂಟೆಗೆ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ 'ನ ಭೂತೋ... ನ ಭವಿಷ್ಯತಿ' ಎಂಬಂತೆ ಅಪಾರ ಸಂಖ್ಯೆಯಲ್ಲಿ ತಮ್ಮ ಉಪಸ್ಥಿತಿಯ ಮೂಲಕ ಹುರಿಯಾಳುಗಳನ್ನು ಹುರಿದುಂಬಿಸಿ, ಸರ್ಕಾರಿ ನೌಕರರ ಸಂಘದ ಪಾರದರ್ಶಕ, ಪ್ರಾಮಾಣಿಕ ಆಡಳಿತದ ಚುಕ್ಕಾಣಿ ಹಿಡಿಯಲು ಹರಸುವಂತೆ ವಿನೀತರಾಗಿ ಕೋರುತ್ತೇವೆ. ಬನ್ನಿ... ಸಧೃಡ ಸಂಘಟನೆಗೆ ಸಮರ್ಥ ನಾಯಕರ ಆಯ್ಕೆ ಮಾಡೋಣ ಎಂದು ಸಿ. ಎಸ್. ಷಡಾಕ್ಷರಿ ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇವರ ಹೆಸರಿನಲ್ಲಿ ಆಮಂತ್ರಣ ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಡಿಸೆಂಬರ್ 18 ಕೊನೆಯ ದಿನ. ಡಿಸೆಂಬರ್ 19ರ ಬೆಳಗ್ಗೆ 11 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 21, ಸಂಜೆ 3 ಗಂಟೆ ಕೊನೆಯ ದಿನ. ಅಂದು ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗುತ್ತದೆ.
ಚುನಾವಣೆ ಡಿಸೆಂಬರ್ 27ರ ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ನಡೆಯಲಿದೆ. ಮತದಾನ ಮುಕ್ತಾಯವಾದ ಬಳಿಕ ಮತ ಎಣಿಕೆ ಪ್ರಾರಂಭವಾಗಲಿದೆ. ಡಿಸೆಂಬರ್ 27ರಂದು ಮತ ಎಣಿಕೆಯ ಫಲಿತಾಂಶ ಘೋಷಣೆಯಾಗಲಿದೆ.
ಸಿ. ಎಸ್. ಷಡಾಕ್ಷರಿ ಬಣದ ಮುನ್ನಡೆ: ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು, ಜಿಲ್ಲಾ ಶಾಖೆಗಳ ಪದಾಧಿಕಾರಿ, ರಾಜ್ಯ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಪೂರ್ಣಗೊಂಡಿದೆ. ಹಾಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಬಣ ಮೇಲುಗೈ ಸಾಧಿಸಿದೆ.
ಈಗಾಗಲೇ ಈ ಕುರಿತು ಮಾಧ್ಯಮಗಳ ಜೊತೆ ಸಿ. ಎಸ್. ಷಡಾಕ್ಷರಿ ಮಾತನಾಡಿದ್ದು, "ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ 13 ಜಿಲ್ಲೆಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ. 18 ಜಿಲ್ಲೆಗಳಲ್ಲಿ ಚುನಾವಣೆ ನಡೆದಿದೆ. 31 ಜಿಲ್ಲೆಗಳಲ್ಲಿ 27ರಲ್ಲಿ ನಮ್ಮ ಬಣ ಜಯಗಳಿಸಿದೆ. ರಾಜ್ಯ ಪರಿಷತ್ ಚುನಾವಣೆಯಲ್ಲಿ 102 ಸ್ಥಾನಗಳಲ್ಲಿ 95 ಸ್ಥಾನದಲ್ಲಿ ನಮ್ಮ ಬಣ ಗೆದ್ದಿದೆ" ಎಂದು ಹೇಳಿದ್ದಾರೆ.
ರಾಜ್ಯ ಸಂಘದ ಖಜಾಂಚಿ ಮತ್ತು ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಡಿಸೆಂಬರ್ 9ರಿಂದ ಆರಂಭವಾಗಲಿದೆ. ತಾಲೂಕು ಸಂಘ, ಜಿಲ್ಲಾ ಸಂಘಗಳು, ಬೆಂಗಳೂರು ಪರಿಷತ್ ಸ್ಥಾನ ಹಾಗೂ ಯೋಜನಾ ಶಾಖೆಗಳಿಂದ ಆಯ್ಕೆಯಾಗಿರುವ 1006 ಮತದಾರರು ಈ ಸ್ಥಾನಕ್ಕೆ ಮತದಾನವನ್ನು ಮಾಡಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications