Government Employee: ಮಗು ದತ್ತು ಪಡೆದ ಸರ್ಕಾರಿ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ
ಬೆಂಗಳೂರು, ಜನವರಿ 09: ಕರ್ನಾಟಕದ ಸರ್ಕಾರಿ ನೌಕರರಿಗೆ ಹಲವು ಮಾದರಿ ರಜೆಗಳಿವೆ. ಅವುಗಳಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ ಮಾತೃತ್ವ ರಜೆ, ಪುರುಷ ನೌಕರರಿಗೆ ಪಿತೃತ್ವ ರಜೆ ಇದೆ. ಈಗ ಸರ್ಕಾರ ಈ ಮಾದರಿ ರಜೆಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿ ಆದೇಶವನ್ನು ಹೊರಡಿಸಿದೆ. ಮಗುವನ್ನು ಹೆತ್ತರೆ ಮಾತ್ರವಲ್ಲ ದತ್ತು ಪಡೆದರೂ ಈ ಮಾದರಿ ರಜೆಗಳು ಅನ್ವಯವಾಗಲಿದೆ ಎಂದು ಆದೇಶ ಹೇಳಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಬಿ. ಎಸ್. ಸುವರ್ಣ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಮಗುವನ್ನು ದತ್ತು ಪಡೆದ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಅಧಿಸೂಚನೆ ದಿನಾಂಕ 22.02.1995, ಅಧಿಸೂಚನೆ ದಿನಾಂಕ 02.06.2000 ಉಲ್ಲೇಖ ಮಾಡಲಾಗಿದೆ.

ಪ್ರಸ್ತಾವನೆ ಏನಿತ್ತು?: ಸರ್ಕಾರದ ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ ಇವಗಳಲ್ಲಿ ಯಾವುದು ಕಡಿಮೆಯೋ ಆವರೆಗೆ ದೊರೆಯಬಹುದಾದ ಮತ್ತು ಅನುಮತಿಸಬಹುದಾದ ರಜೆಯನ್ನು (60 ದಿವಸಗಳು ಮೀರದಂತೆ ವೈದ್ಯಕೀಯ ಪ್ರಮಾಣಪತ್ರವನ್ನು ಹಾಜರುಪಡಿಸದೆ ಪರಿವರ್ತಿತ ರಜೆ ಮತ್ತು (ಗಳಿಸದ ರಜೆ ಸೇರಿದಂತೆ) ಅಂತಹ ಮಹಿಳಾ ಸರ್ಕಾರಿ ನೌಕರಳು ದತ್ತಕದ ಸಮಯದಲ್ಲಿ ಎರಡು ಜೀವಂತ ಮಕ್ಕಳನ್ನು ಹೊಂದಿರತಕ್ಕದ್ದಲ್ಲ ಎಂಬ ಷರತ್ತಿಗೊಳಪಟ್ಟು ಮಂಜೂರು ಮಾಡಲು ಅವಕಾಶ ಕಲ್ಪಿಸಿದೆ.
ಸರ್ಕಾರದ ಅಧಿಸೂಚನೆಯಲ್ಲಿ ಪುರುಷ ನೌಕರರಿಗೆ ಅವನ ಪತ್ನಿಯ ಹೆರಿಗೆಯ ಪ್ರಾರಂಭದಲ್ಲಿ 15 ದಿನಗಳ ಕಾಲ ಪಿತೃತ್ವ ರಜೆಯನ್ನು ಮಂಜೂರು ಮಾಡಲು ಅವಕಾಶ ಕಲ್ಪಿಸಿರುವುದಾಗಿದೆ. ಇದೇ ಮಾದರಿಯ ಸೌಲಭ್ಯವನ್ನು ದತ್ತಕ ಪಡೆಯುವ ರಾಜ್ಯ ಸರ್ಕಾರಿ ನೌಕರರಿಗೂ ಸಹ ಮಾತೃತ್ವ ಮತ್ತು ಪಿತೃತ್ವ ರಜೆಯ ಮಾದರಿಯಲ್ಲಿ ರಜೆಯನ್ನು ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ವ್ಯಾಪ್ತಿಯ ಅರ್ಹ ನೌಕರರ ಪ್ರಕರಣಗಳಲ್ಲಿ ಮಗುವನ್ನು ದತ್ತು ಪಡೆಯುವಂತಹ ಸರ್ಕಾರಿ ನೌಕರರಿಗೆ ಎರಡು ಜೀವಂತ ಮಕ್ಕಳನ್ನು ಹೊಂದಿರತಕ್ಕದ್ದಲ್ಲವೆಂಬ ಷರತ್ತಿಗೆ ಒಳಪಟ್ಟು ಮಗುವಿಗೆ ಒಂದು ವರ್ಷ ತುಂಬುವ ಅವಧಿಗೆ ಮೀರದಂತೆ ಮಹಿಳಾ ನೌಕರರಿಗೆ ಹೆರಿಗೆ ರಜೆ ಮಾದರಿಯಲ್ಲಿ 180 ದಿನಗಳು ಮತ್ತು ಪುರುಷ ನೌಕರರಿಗೆ ಪಿತೃತ್ವ ರಜೆ ಮಾದರಿಯಲ್ಲಿ 15 ದಿನಗಳ ರಜೆಯ ಮಂಜೂರಾತಿ ಅವಕಾಶವನ್ನು ಕಲ್ಪಿಸಿದೆ. ಈ ಅಂಶಗಳನ್ನು ಅವಲೋಕಿಸಿ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ.
ಸರ್ಕಾರದ ಆದೇಶ: ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ-135 'ಎ' ರಲ್ಲಿ ವಿಧಿಸಿರುವ ಇತರೆ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಮಹಿಳಾ ಸರ್ಕಾರಿ ನೌಕರಳು ಮಗುವನ್ನು ದತ್ತು ಪಡೆದ ಸಂದರ್ಭದಲ್ಲಿ 180 ದಿನಗಳ ರಜೆಯನ್ನು (ಹೆರಿಗೆ ರಜೆ ಮಾದರಿಯಲ್ಲಿ) ದತ್ತು ಪ್ರಕ್ರಿಯೆಯು ಮಾನ್ಯತೆ ಹೊಂದಿದ ದಿನಾಂಕದಿಂದ ಮಂಜೂರು ಮಾಡತಕ್ಕದ್ದು.
ಅಂತಹ ದತ್ತಕ ಪಡೆದ ಪ್ರಕರಣದಲ್ಲಿ ಪಿತೃತ್ವ ರಜೆ ಮಾದರಿಯಲ್ಲಿಯೇ ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ-135 ಬಿ ರಲ್ಲಿ ವಿಧಿಸಿರುವ ಇತರೆ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು 15 ದಿನಗಳ ರಜೆಯನ್ನು ದತ್ತು ಪ್ರಕ್ರಿಯೆಯು ಮಾನ್ಯತೆ ಹೊಂದಿದ ದಿನಾಂಕದಿಂದ ಮಂಜೂರು ಮಾಡತಕ್ಕದ್ದು.
ಈ ಬಗ್ಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗೆ ಅವಶ್ಯಕ ತಿದ್ದುಪಡಿಯನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications