Get Updates
Get notified of breaking news, exclusive insights, and must-see stories!

Government employee; ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, ಆದೇಶ

ಬೆಂಗಳೂರು, ಮಾರ್ಚ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಹೆಚ್ಚಳ ಜನವರಿ 1, 2024ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶ ಹೇಳಿದೆ.

ಈ ಕುರಿತು ಮಂಗಳವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತ ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶ ಹೊರಡಿಸಿದ್ದಾರೆ. ಈ ಆದೇಶ ತುಟ್ಟಿಭತ್ಯೆಯ ದರಗಳ ಪರಿಷ್ಕರಣೆ ಎಂಬ ವಿಷಯ ಒಳಗೊಂಡಿದೆ.

Karnataka Government Employees DA Hiked Order

ಆದೇಶದ ವಿವರ: 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶ ಹೇಳಿದೆ.

ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ, ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶ ಹೇಳಿದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶ ತಿಳಿಸಿದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.

ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಹೇಳಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳವಾರ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿತ್ತು. ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ 01/01/2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4% ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಕರ್ನಾಟಕ ರಾಜ್ಯ ಸರ್ಕಾರ ನೌಕರರಿಗೆ ದಿನಾಂಕ 01/01/2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿತ್ತು. ಈಗ ಈ ಕುರಿತು ಸರ್ಕಾರಿ ಆದೇಶವಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1792.71 ಕೋಟಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+