Government Employees: NPS ರದ್ದುಗೊಳಿಸುವಂತೆ ಸರ್ಕಾರಿ ನೌಕರರು ಪಟ್ಟು ಹಿಡಿದಿರುವುದು ಏಕೆ?

ಬೆಂಗಳೂರು, ಫೆಬ್ರವರಿ 08: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಕುರಿತು ಸಿದ್ದತೆಯನ್ನ ಮಾಡಿಕೊಳ್ಳುತ್ತಿದ್ದು, ಈ ಹೊತ್ತಲ್ಲಿ ಸರ್ಕಾರಕ್ಕೆ ಬಿಸಿಮುಟ್ಟಿಸುವ ಕೆಲಸಕ್ಕೆ ರಾಜ್ಯದ ಸರ್ಕಾರಿ ನೌಕರರು ಮುಂದಾಗಿದ್ದಾರೆ.

ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ತರುವಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ಈ ಬೇಡಿಕೆ ಕುರಿತು ಎನ್ಪಿಎಸ್ ನೌಕರರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸರ್ಕಾರಿ ನೌಕರರ ಪ್ರತಿಭಟನೆಯಿಂದಾಗಿ ನಿನ್ನೆ(ಶುಕ್ರವಾರ) ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿದ್ದವು.

Karnataka Government Employees Demand Old Pension Scheme

ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ಕಾರಣವೇನೆಂದರೇ, 2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್ಪಿಎಸ್ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದರು.

ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. NPS ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ಎನ್ಪಿಎಸ್ ರದ್ದುಪಡಿಸಿದ ಇತರೆ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇನ್ನೂ ನೆರೆಹೊರೆ ರಾಜ್ಯಗಳಾದ ರಾಜಸ್ಥಾನ, ಛತ್ತೀಸ್ಗಡ, ಜಾರ್ಖಂಡ್ ಸೇರಿದಂತೆ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸುವುದಾಗಿ ಹೇಳಿದ್ದವು. ಪಂಜಾಬ್ ಸರ್ಕಾರ ಕೂಡ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ಹೇಳಿತ್ತು. ಕರ್ನಾಟಕದಲ್ಲಿಯೂ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸಬೇಕು ಎಂಬ ಆಗ್ರಹ ಸರ್ಕಾರಿ ನೌಕರರಿಂದ ಕೇಳಿಬಂದಿತ್ತು. ಸದ್ಯ ಸರ್ಕಾರಿ ನೌಕರರ ಬೇಡಿಕೆ ಕುರಿತು ಸರ್ಕಾರ ಮೌನವಹಿಸಿದೆ.

ಎನ್​ಪಿಎಸ್ ಎಂಬುದು ರಾಷ್ಟ್ರೀಯ ಅಥವಾ ಹೊಸ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಮತ್ತು ಹೂಡಿಕೆಗಳ ಸಂಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಸರ್ಕಾರಿ ಉದ್ಯೋಗಿ ಕೂಡ ಮೂಲ ವೇತನದ ಶೇಕಡಾ 10ರಷ್ಟನ್ನು ನಿವೃತ್ತಿ ನಿಧಿಗೆ ಕೊಡುಗೆಯಾಗಿ ನೀಡಬೇಕು. ನಿವೃತ್ತಿಯ ನಂತರ ನಾಗರಿಕರಿಗೆ ಹಣಕಾಸು ಭದ್ರತೆಯನ್ನು ಒದಗಿಸುವುದಕ್ಕಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+