Government Employee: ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಆದೇಶ, ವಿವರ
ಬೆಂಗಳೂರು, ಜನವರಿ 18: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. 2025ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ ಸರ್ಕಾರಿ ಆದೇಶವನ್ನು ಹೊರಡಿಸಿದೆ. ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 21/12/2023 ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಜಯ್ ಎಸ್. ಕೊರಡೆ, ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

ಆದೇಶದಲ್ಲಿ ದಿನಾಂಕ 21.12.2023ರ ಸರ್ಕಾರಿ ಆದೇಶದಲ್ಲಿ 2024ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು.
ಸದರಿ ಬ್ಲಾಕ್ ಅವಧಿಯು ದಿನಾಂಕ 31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನು/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ.
ಸರ್ಕಾರದ ಆದೇಶ: 2025ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ ಉದ್ಯಮಗಳ ಸ್ಥಿತಿಗತಿಗಳಿಗೊಳಪಟ್ಟು ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದೆ.
ಈ ಸೌಲಭ್ಯವು ದಿನಾಂಕ 1/1/2025 ರಿಂದ 31/12/2025ರ ವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ.
ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2025ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶ ಹೇಳಿದೆ.
-
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications