ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರಿಗೆ ಕಹಿ ಸುದ್ದಿ, ವೇತನ ಪರಿಷ್ಕರಣೆ ಸದ್ಯಕ್ಕಿಲ್ಲ

By Mahesh
|
Google Oneindia Kannada News

ಬೆಂಗಳೂರು, ಜುಲೈ 13: ಕೇಂದ್ರ ವೇತನ ಆಯೋಗಗಳ ಶಿಫಾರಸ್ಸು ಮತ್ತು ವೇತನ ಪರಿಷ್ಕರಣೆ ಅವಧಿಯನ್ನು ಕರ್ನಾಟಕ ಸರ್ಕಾರ ಅನುಸರಿಸುವುದಿಲ್ಲ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಂಬಳ, ಭತ್ಯೆ ಏರಿಕೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.[ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಕೊಡುಗೆ]

ಕೇಂದ್ರ ಸರ್ಕಾರಿ ನೌಕರರ ವೇತನ ಶ್ರೇಣಿಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರ ವೇತನ ಹೋಲಿಕೆ ಮಾಡಲು ಆಗುವುದಿಲ್ಲ. ರಾಜ್ಯ ಸರ್ಕಾರ ಸಂಪ್ರದಾಯಿಕವಾಗಿ ತನ್ನದೇ ಆದ ವೇತನ ಆಯೋಗಗಳ ಶಿಫಾರಸ್ಸಿನ ಮೇರೆಗೆ ವೇತನ ಪರಿಷ್ಕರಣೆ ಮಾಡಿಕೊಂಡು ಬಂದಿದೆ. ಐದು ವರ್ಷಗಳ ವೇತನ ಪರಿಷ್ಕರಣೆ ಕ್ರಮದಂತೆ ವೇತನ ಆಯೋಗದ ಶಿಫಾರಸು ಅನ್ವಯ ಮುಂದಿನ ವೇತನ ಪರಿಷ್ಕರಣೆ ಏನಿದ್ದರೂ 2017ರಲ್ಲಿ ನಿರೀಕ್ಷಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.[7ನೇ ವೇತನ ಆಯೋಗ ಏನು? ಏತ್ತ? ಯಾಕೆ? ಲೆಕ್ಕಾಚಾರ ಹೇಗೆ?]

Karnataka Government employees to get next revision is due in 2017

ಬಿಜೆಪಿ ಶಾಸಕ ವಿಶ್ವೇಶ್ವರ ಕಾಗೇರಿ ಮತ್ತು ರವಿ ಸುಬ್ರಹ್ಮಣ್ಯ ಅವರು ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಲ್ಲಿ ವೇತನ ಪರಿಷ್ಕರಣೆ ಕುರಿತಂತೆ ಉಂಟಾಗಿರುವ ಗೊಂದಲ ಪರಿಹರಿಸುವಂತೆ ಕೋರಿ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.[ಸಚಿವರುಗಳಿಗೆ ತಿಂಗಳಿಗೆ 1 ಸಾವಿರ ಲೀಟರ್ ಇಂಧನ ಭಾಗ್ಯ]

ಕೇಂದ್ರ ಸರ್ಕಾರಿ ನೌಕರರಿಗೆ ನೀಡುತ್ತಿರುವ 7ನೇ ವೇತನ ಆಯೋಗ ಸೌಲಭ್ಯವನ್ನು ವಿಸ್ತರಿಸುವ ಪ್ರಶ್ನೆಯೂ ಇಲ್ಲ. 7ನೇ ವೇತನ ಆಯೋಗ ರಚನೆ ಮಾಡುವ ಉದ್ದೇಶವೂ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಶಿಫಾರಸುಗಳನ್ನು ರಾಜ್ಯದಲ್ಲೂ ಅಳವಡಿಸುವಂತೆ ನೌಕರರ ಸಂಘಗಳು ಆಗ್ರಹಿಸಿವೆ.

English summary
The recommendations of the Seventh Pay Commission would not have a bearing on salaries in Karnataka immediately.The state follows a five-year cycle based on recommendations by its own pay committee, and the next revision is due in 2017
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X