Government Employee: ಕಛೇರಿ ಸಮಯ ಪಾಲನೆ, ಸರ್ಕಾರಿ ನೌಕರರಿಗೆ ಹೊಸ ಸುತ್ತೋಲೆ
ಬೆಂಗಳೂರು, ಜನವರಿ 25: ಸರ್ಕಾರಿ ಕಛೇರಿಗಳಿಗೆ ಅಧಿಕಾರಿಗಳು/ ನೌಕರರು ಸರಿಯಾದ ಸಮಯಕ್ಕೆ ಆಗಮಿಸುವುದಿಲ್ಲ. ಕಛೇರಿ ವೇಳೆ ಮುಗಿಯುವ ಮೊದಲೇ ಅಲ್ಲಿಂದ ಹೊರಟಿರುತ್ತಾರೆ ಎಂಬ ಆರೋಪಗಳಿವೆ. ಈ ಕುರಿತು ಜನರು ಹಲವು ಬಾರಿ ದೂರುಗಳನ್ನು ಸಹ ನೀಡುತ್ತಾರೆ. ಆದ್ದರಿಂದ ಕಛೇರಿ ವೇಳೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಪಾಲಿಸಬೇಕಾದ ನಿಯಮಗಳ ಕುರಿತು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಈ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಈ ಕುರಿತು ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯು ಕಛೇರಿ ವೇಳೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಪಾಲಿಸಬೇಕಾದ ಮುಖ್ಯ ಸೂಚನೆಗಳು ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಪತ್ರ ದಿನಾಂಕ 1/10/2024ರ ಉಲ್ಲೇಖಿಸಲಾಗಿದೆ.

ಸುತ್ತೋಲೆಯ ವಿವರಗಳು: ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ ಎಂದು ಹೇಳಿದೆ.
* ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
* ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
* ಕಛೇರಿ ಸಮಯದಲ್ಲಿ ನೌಕರರು/ ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
* ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
* ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
* ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
* ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
* ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
* ಇ-ಆಫೀಸ್ ಲಭ್ಯವಿರುವ ಕಡೆ ಕಡತ/ ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
ಅಲ್ಲದೇ ಸುತ್ತೋಲೆಯಲ್ಲಿ ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಈಗಾಗಲೇ ಕರ್ನಾಟಕ ಸರ್ಕಾರ ತನ್ನ ನೌಕರರ ಗುರುತಿನ ಚೀಟಿ ಟ್ಯಾಗ್ ವಿನ್ಯಾಸವನ್ನು ಬದಲಿಸಿದೆ. ಹೊಸದಾಗಿ ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ನೂತನ ಟ್ಯಾಗ್ ಪರಿಚಯಿಸಿದ್ದು, ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಬೇಕು ಎಂದು ವಿವಿಧ ಸುತ್ತೋಲೆಗಳ ಮೂಲಕ ಮಾಹಿತಿ ನೀಡಿದೆ. ಆದರೂ ಸಹ ನೌಕರರು/ ಸಿಬ್ಬಂದಿ ಅದನ್ನು ಧರಿಸುತ್ತಿಲ್ಲ ಎಂಬ ದೂರುಗಳ ಹಿನ್ನಲೆಯಲ್ಲಿ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಅಲ್ಲದೇ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು ಎಂದು ಈ ಹಿಂದೆ ಸುತ್ತೋಲೆಯಲ್ಲಿ ಸೂಚನೆಯನ್ನು ನೀಡಲಾಗಿತ್ತು.
-
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ











Click it and Unblock the Notifications