ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 4ರಂದು ಕರ್ನಾಟಕದ ಸರ್ಕಾರಿ ನೌಕರರ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜೂನ್ 02 : ಕರ್ನಾಟಕದ ಸರ್ಕಾರಿ ನೌಕರರು ಜೂನ್ 4ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಅಂದು ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಈ ಕುರಿತು ಮಾಹಿತಿ ನೀಡಿದೆ. ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ನೌಕರ ಕಾರ್ಮಿಕ ವಿರೋಧಿ, ನೌಕರ ವಿರೋಧಿ ತೀರ್ಮಾನಗಳನ್ನು ಖಂಡಿಸಲು ಪ್ರತಿಭಟನೆ ನಡೆಸಲಾಗುತ್ತಿದೆ.

ಅನಗತ್ಯ ಸರ್ಕಾರಿ ಇಲಾಖೆಗಳು ರದ್ದು: ಆರ್.ಅಶೋಕ್ಅನಗತ್ಯ ಸರ್ಕಾರಿ ಇಲಾಖೆಗಳು ರದ್ದು: ಆರ್.ಅಶೋಕ್

ಸರ್ಕಾರ ವಿವಿಧ ಇಲಾಖೆಗಳನ್ನು ವಿಲೀನ ಮಾಡಲು ಹೊರಟಿರುವುದು, ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಏರಿಕೆ ಮಾಡಿರುವುದು ಸೇರಿದಂತೆ ಸರ್ಕಾರದ ಕಾರ್ಮಿಕ ಮತ್ತು ನೌಕರ ವಿರೋಧಿ ತೀರ್ಮಾನಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ-ಪಿಯು ಮಂಡಳಿ ವಿಲೀನಎಸ್‌ಎಸ್‌ಎಲ್‌ಸಿ-ಪಿಯು ಮಂಡಳಿ ವಿಲೀನ

 Karnataka Government Employees Protest On June 4

ಜೂನ್ 4ರ ಗುರುವಾರ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ. ಆದರೆ, ಎಲ್ಲರೂ ಅಂದು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳ ಕುರಿತು ಮನವಿಯನ್ನು ಕೊಡುವ ನಿರೀಕ್ಷೆ ಇದೆ.

 Fake: ಸರ್ಕಾರಿ ನೌಕರರ ಕಚೇರಿ ಅವಧಿ ವಿಸ್ತರಣೆಯಾಗಿಲ್ಲ Fake: ಸರ್ಕಾರಿ ನೌಕರರ ಕಚೇರಿ ಅವಧಿ ವಿಸ್ತರಣೆಯಾಗಿಲ್ಲ

ಕರ್ನಾಟಕ ಸರ್ಕಾರ ಕೈಗಾರಿಕೆ ಹಾಗೂ ಇನ್ನಿತರ ಉದ್ಯಮ ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಮೇ 22ರಿಂದ ಆಗಸ್ಟ್ 21ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಕಾರ್ಮಿಕ ಇಲಾಖೆ ಹೇಳಿತ್ತು.

ಸರ್ಕಾರದ ವಿವಿಧ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಸ್ತಾಪವೂ ಸರ್ಕಾರದ ಮುಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಉಪ ಸಮಿತಿಯನ್ನು ರಚನೆ ಮಾಡಲಾಗಿದೆ. ಸರ್ಕಾರಿ ನೌಕರರು ಸರ್ಕಾರ ಈ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

English summary
Karnataka State Government Employees Federation will work wearing black badges on June 4, 2020 as a sign of protest against the anti-employees and anti-labour decisions of the B. S. Yediyurappa lead Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X