ಕರ್ನಾಟಕ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಮಹತ್ವದ ಸಭೆ, ಸಿ.ಎಸ್. ಷಡಾಕ್ಷರಿ ಭಾಗಿ... Government Employees
ಬೆಂಗಳೂರು ನಗರ ಜಿಲ್ಲೆಯಲ್ಲಿ 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಈ ಬಗ್ಗೆ ಇಂದು ಮಹತ್ವದ ಸಭೆ ನಡೆಸಲಾಗಿದೆ. ಮಾರ್ಚ್ 27 & 28 ರಂದು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಿದ್ಧತೆ ಕೈಗೊಳ್ಳಲು ಇದೀಗ ಜಿಲ್ಲಾಧಿಕಾರಿ ಡಾ. ಜಗದೀಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ & ಸಂಘದ ಪಾದಾಧಿಕಾರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಸೇರಿ ಪ್ರಮುಖರು ಹಾಜರಿದ್ದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಜಗದೀಶ್, ಸರ್ಕಾರಿ ನೌಕರರ ಕ್ರೀಡಾಕೂಟದ ಬಗ್ಗೆ ಮಾಹಿತಿ ನೀಡಿದರು.

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಮಾರ್ಚ್ 27ಕ್ಕೆ ಹಾಗೂ ಸಮಾರೋಪ ಸಮಾರಂಭ ಮಾರ್ಚ್ 28ಕ್ಕೆ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ. ಜಗದೀಶ್ ಅವರು, ಕ್ರೀಡಾಕೂಟದ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ, ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ಸೇವೆ ಮತ್ತು ವೈದ್ಯಕೀಯ ಸಿಬ್ಬಂದಿ ನಿಯೋಜಿಸಲು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಹಾಗೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಮಾಡಲು ಸೂಚಿಸಿದ್ದಾರೆ. ಜಿಲ್ಲೆ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮೂಲ ಸೌರ್ಕಯದ ಜೊತೆ ಊಟದ ವ್ಯವಸ್ಥೆಯ ಮಾಡುವಂತೆ ಮುಜರಾಯಿ ತಹಶೀಲ್ದಾರರಿಗೆ ತಿಳಿಸಿದ್ದಾರೆ. ಬೇಸಿಗೆ ಸಮಯವಾದ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ.
ಮಹಿಳಾ ಕ್ರೀಡಾಕೂಟ ಮುಂದೂಡಿಕೆ
ಯುವ ಸಬಲೀಕರಣ & ಕ್ರೀಡಾ ಇಲಾಖೆಯಿಂದ ಮಾರ್ಚ್ 7 ರಂದು ಬೆಂಗಳೂರು ನಗರದಲ್ಲಿ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟ ಮುಂದೂಡಿಕೆ ಆಗಿದೆ. ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಕ್ರೀಡಾಕೂಟ ಅನಿವಾರ್ಯ ಕಾರಣಗಳಿಂದ ಮಾರ್ಚ್ 11 ರಂದು ಬೆಳಗ್ಗೆ 10ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಯುವ ಸಬಲೀಕರಣ & ಕ್ರೀಡಾ ಇಲಾಖೆ, ಕಸ್ತೂರಬಾ ರಸ್ತೆ, ಗೇಟ್ ನಂ.12, ಕೊಠಡಿ ಸಂಖ್ಯೆ, 17-18, ಬೆಂಗಳೂರು -01ಗೆ ಸಂಪರ್ಕಿಸಿ. ಅಥವಾ ದೂರವಾಣಿ ಸಂಖ್ಯೆ 080-22239771 ಯನ್ನ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಲಾಗಿದೆ.












Click it and Unblock the Notifications