ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್; ಮುಖ್ಯ ಶಿಕ್ಷಕರಿಗೆ ಬಡ್ತಿ ಕುರಿತು ಸರ್ಕಾರ ಆದೇಶ: ಯಾವಾಗಿಂದ ಕೌನ್ಸೆಲಿಂಗ್?
ಬೆಂಗಳೂರು: ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭಕ್ಕೂ ಮುನ್ನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಶಾಲೆಗಳ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯು ವರ್ಷಾಂತ್ಯದಲ್ಲಿ ಸಿಹಿಸುದ್ದಿ ನೀಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಬಡ್ತಿ ನೀಡುವ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಜನವರಿ 1ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರದಿಂದ ರಾಜ್ಯದ ಪ್ರಾಥಮಿಕ ಶಾಲೆಗಳ ಸುಮಾರು 2 ಸಾವಿರ ಮುಖ್ಯ ಶಿಕ್ಷಕರು ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ಪಡೆಯಲಿದ್ದಾರೆ. ಮುಖ್ಯ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ಬಳಿಕ ವಿವಿಧ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗುವುದು.

ಕರ್ನಾಟಕ ಸರ್ಕಾರಿ ನೌಕರರ (ಜೇಷ್ಟತಾ) ನಿಯಮಗಳು-1957ರ ನಿಯಮಗಳ ಪ್ರಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ (HM) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿದೆ. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ರ ಸೆಕ್ಷನ್ 3ರ ಪ್ರಕಾರೆ 'ಸಿ' ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕಾಗುತ್ತದೆ.
ಪ್ರಯುಕ್ತ, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶ್ರೇಷ್ಟತಾ ನಿಯಮಾನುಸಾರ ಆಯಾ ವೃಂದವಾರು ಪ್ರಕಟಿಸಲಾಗಿರುವ ಜಿಲ್ಲಾ ಅಂತಿಮ ಜೇಷ್ಟತಾ ಪಟ್ಟಿಗೆ ಅನುಗುಣವಾಗಿ ಬಡ್ತಿಯನ್ನು ನೀಡಬೇಕಾಗಿದ್ದು ಪ್ರಕಟಿತ ವೇಳಾಪಟ್ಟಿಯಂತೆ ಜಿಲ್ಲಾ ಹಂತದಲ್ಲಿ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಬಡ್ತಿಗೆ ಅರ್ಹರಿರುವ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಜೇಷ್ಟತಾ ಪಟ್ಟಿಯನ್ನು ದಿನಾಂಕ: 01/01/2025 ರಲ್ಲಿದ್ದಂತೆ ಅಂತಿಮಗೊಳಿಸಲು ಸಕ್ಷಮ ಪ್ರಾಧಿಕಾರಿಗಳಿಗೆ ತಿಳಿಸಿದೆ.
ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಎದುರಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಕ್ಷಮ ಪ್ರಾಧಿಕಾರಿಗಳಾದ ಆಯಾ ಜಿಲ್ಲಾ ಉಪ ನಿರ್ದೆಶಕರು(ಆಡಳಿತ)ರವರುಗಳ ಹಂತದಲ್ಲಿ ರಾಜ್ಯದಾದ್ಯಂತ ಏಕಕಾಲದಲ್ಲಿ ಕೌನ್ಸಿಲಿಂಗ್ ಮೂಲಕ ಬಡ್ತಿ ಪ್ರಕ್ರಿಯೆಗಳು ನಡೆಯುತ್ತವೆ.
ಈ ಸಂದರ್ಭದಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ವ್ಯಕ್ತಿಗಳಿಗೆ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಹಾಗೂ ಅಂಗವೈಕಲ್ಯತೆಯನ್ನು ಗುರುತಿಸುವ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿ ತಜ್ಞರ ಸಮಿತಿಯ ಸಭೆಯಲ್ಲಿ ಗುರುತಿಸಿರುವ ಅಂಗವೈಕಲ್ಯತೆಯ ವರ್ಗಗಳನ್ನು ನಿಗಧಿಪಡಿಸಲಾಗಿದ್ದು ಅದರಂತೆ ಕ್ರಮವಹಿಸತಕ್ಕದ್ದು. ಬಡ್ತಿ ಪ್ರಕ್ರಿಯೆಯ ಕೌನ್ಸಿಲಿಂಗ್ ಕೈಗೊಳ್ಳುವಾಗ ಈ ಕೆಳಕಂಡ ಮಾರ್ಗಸೂಚಿ ಅಂಶಗಳನ್ನು ಅನುಸರಿಸಲು ತಿಳಿಸಿದೆ.
1. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ-2020ರ ಸೆಕ್ಷನ್-3 ರಂತೆ'ಸಿ' ವಲಯದಲ್ಲಿನ ಶಾಲೆಗಳಲ್ಲಿ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ 'ಸಿ' ವಲಯದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಸಂಬಂಧಿಸಿದ ಶಾಲೆಗಳಲ್ಲಿ ತೆರವುಗೊಳಿಸಬೇಕಿದೆ. ಅಂದರೆ, 'ಬಿ' ವಲಯದಲ್ಲಿ ಕರ್ತವ್ಯ ನಿರತ ಹಿರಿಯ ಮುಖ್ಯ ಶಿಕ್ಷಕರನ್ನು 'ಎ' ವಲಯದ ಶಾಲೆಗಳಿಗೆ ಹಾಗೂ 'ಸಿ' ವಲಯದಲ್ಲಿನ ಕರ್ತವ್ಯನಿರತ ಹಿರಿಯ ಮುಖ್ಯ ಶಿಕ್ಷಕರನ್ನು 'ಬಿ' ವಲಯದಲ್ಲಿನ ಶಾಲೆಗೆ ಕೌನ್ಸಿಲಿಂಗ್ ಮೂಲಕ ಸ್ಥಳಾಂತರಿಸುವ ಮೂಲಕ 'ಸಿ' ವಲಯದಲ್ಲಿ ಖಾಲಿ ಹುದ್ದೆಗಳನ್ನು ಲಭ್ಯಪಡಿಸಬೇಕಾಗುತ್ತದೆ.
2. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ- 2020ರ ಸೆಕ್ಷನ್-10 ರ ಪ್ರಕಾರ ವಲಯ ವರ್ಗಾವಣೆಯಲ್ಲಿ ಹಿರಿಯ ಮುಖ್ಯ ಶಿಕ್ಷಕರಿಗೆ ನಿಯಮಾನುಸಾರ ಆಧ್ಯತೆಯನ್ನು ಪರಿಗಣಿಸುವುದು.
3. ಬಡ್ತಿಗೆ ಅರ್ಹರಿರುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಜೇಷ್ಟತಾ ಪಟ್ಟಿಯನ್ನು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆಡಳಿತ) ಇವರು ಪ್ರಕಟಿಸತಕ್ಕದ್ದು, ದಿನಾಂಕ: 31/12/2025 ರಲ್ಲಿದ್ದಂತೆ ಜಿಲ್ಲೆಯಲ್ಲಿ ನಿವೃತ್ತಿ ಮರಣ ರಾಜೀನಾಮೆ ಇತ್ಯಾದಿ ಕಾರಣಗಳಿಂದ ತೆರವಾಗಿ ಲಭ್ಯವಿರುವ / ಇ.ಇ.ಡಿ.ಎಸ್ ನಲ್ಲಿ ಇಂದೀಕರಣವಾಗಿರುವ ಹಿರಿಯ ಮುಖ್ಯ ಶಿಕ್ಷಕರ ಖಾಲಿ ಹುದ್ದೆಗಳ ಸಂಖ್ಯೆಯನ್ನು ಮತ್ತು ಈಗಾಗಲೇ ಇಲಾಖೆಯಿಂದ ವರ್ಗಾವಣೆ ನಂತರ ನಿಗಧಿಪಡಿಸಿದ (ತಂತ್ರಾಂಶದಲ್ಲಿ) ಹೊರಡಿಸಲಾಗಿರುವ ಇ-ರಿಜಿಸ್ಟರ್‌ನಲ್ಲಿ ಮಂಜೂರಾಗಿರುವ ವೃಂದವಾರು/ ತಾಲ್ಲೂಕುವಾರು/ ಜಿಲ್ಲಾವಾರು ಹುದ್ದೆ ಮಂಜೂರಾತಿಯ ಮಿತಿಯೊಳಗೆ ಖಾಲಿಹುದ್ದೆಗಳು ಲಭ್ಯವಿರುವ ಬಗ್ಗೆ ತಂತ್ರಾಂಶದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಖಚಿತಪಡಿಸಿಕೊಳ್ಳತಕ್ಕದ್ದು.
4. ಉಲ್ಲೇಖ-7 ರ ಪ್ರಕಾರ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹೊಂದಾಣಿಕೆ ಕುರಿತ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿರುವ ಕೋಷ್ಟಕದ ಪ್ರಕಾರ 250 ಕ್ಕಿಂತ ಹೆಚ್ಚಿನ ದಾಖಲಾತಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮಾತ್ರ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಯನ್ನು ಬಡ್ತಿಗೆ ಪರಿಗಣಿಸತಕ್ಕದ್ದು. ಪ್ರಸ್ತುತ ಯಾವುದೇ ಶಾಲೆಯಲ್ಲಿ 250 ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇರುವ ಶಾಲೆಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸತಕ್ಕದ್ದಲ್ಲ.
5. ಜಿಲ್ಲೆಗಳಲ್ಲಿ ಹಿರಿಯ ಮುಖ್ಯ ಶಿಕ್ಷಕರ 'ಎ' 'ಬಿ' 'ಸಿ' ವಲಯದ ಖಾಲಿ ಹುದ್ದೆಗಳನ್ನು ಮೊದಲು ಗುರುತಿಸಿಕೊಳ್ಳಬೇಕು. ವಲಯದ ವರ್ಗಾವಣೆಯ ಆಗತ್ಯತೆ ಕಂಡುಬಂದಲ್ಲಿ ಹಿರಿಯ ಮುಖ್ಯ ಶಿಕ್ಷಕರ ಜೇಷ್ಟತೆಗೆ ಅನುಗುಣವಾಗಿ 'ಬಿ' ವಲಯದಿಂದ 'ಎ' ವಲಯಕ್ಕೂ ಮತ್ತು 'ಸಿ' ವಲಯದಿಂದ 'ಬಿ' ವಲಯಕ್ಕೂ ಶಿಕ್ಷಕರನ್ನು ಸ್ಥಳಾಂತರಿಸುವ ಮೂಲಕ 'ಸಿ' ವಲಯದ ಖಾಲಿ ಹುದ್ದೆಯನ್ನು ಸೃಜಿಸಿಕೊಳ್ಳತಕ್ಕದ್ದು.
6. ಬಡ್ತಿಗೆ ಅರ್ಹರಿರುವ ಮುಖ್ಯ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಇವರು ಪ್ರಕಟಿಸತಕ್ಕದ್ದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications