ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಬರ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಸರ್ಕಾರ ಸಿದ್ಧತೆ

|
Google Oneindia Kannada News

ಬೆಂಗಳೂರು, ಮೇ 14: ರಾಜ್ಯದ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ.ಆದರೆ ಇನ್ನೂ ಹಲವು ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ಹೀಗಾಗಿ ಮೋಡಬಿತ್ತನೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಕೃಷ್ಣಬೈರೇಗೌಡ ಅವರು ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ವಿಷಯ ತಿಳಿಸಿದ್ದಾರೆ. ಮಳೆ ಅಭಾವವಿರುವ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ 30 ಕೋಟಿ ರೂಪಾಯಿ ಯೋಜನೆ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ಲೋಕಸಭಾ ಚುನಾವಣೆ ಮುಂಚೆಯೇ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿ ಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು ಸ್ಥಿತಿಗತಿಯ ಅವಲೋಕನ ನಡೆಸಲು ಮೇ 15ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ.

Karnataka government gets ready for cloud seeding project

ಆದರೆ ವಿಧಾನಸಭೆ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಿರುವ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳ ಅಧಿಕಾರಿಗಳನ್ನು ಹೊರತುಪಡಿಸಿ ಸಂವಾದ ನಡೆಯಲಿದೆ.

English summary
State government is hoping to influence the upcoming monsoon and capture as much water as possible from the rain clouds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X