Ration Card: 20 ಲಕ್ಷ ರೇಷನ್ ಕಾರ್ಡ್‌ದಾರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!
Ration Card Holders: ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಮತ್ತೊಮ್ಮೆ ರೇಷನ್ ಕಾರ್ಡ್‌ದಾರರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ತಿಂಗಳ ಮುಂಚೆಯಷ್ಟೇ ಹಲವು ಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದು ಹಾಗೂ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದಾದ ಮೇಲೆ ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಬಿಟ್ಟಿತ್ತು. ಇದೀಗ ಮತ್ತೆ ರೇಷನ್ ಕಾರ್ಡ್ ಪರಿಷ್ಕರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಮತ್ತೆ ಪ್ರಾರಂಭವಾಗಿದೆ.
ಕರ್ನಾಟಕದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ / ತಿದ್ದುಪಡಿ ಮಾಡುವುದು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಸಂಬಂಧ ರಾಜ್ಯ ಸರ್ಕಾರವು ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಕೊಟ್ಟಿದೆ. ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಣೆಗೆ ಒಳಪಡಿಸುವುದಾಗಿ ಹೇಳಿದೆ. ಮತ್ತೆ ರಾಜ್ಯದಲ್ಲಿ ರೇಷನ್ ಕಾರ್ಡ್‌ಗಳ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆಯೇ ಮಾಡಲಾಗುತ್ತಿದೆ. ಹೀಗಾಗಿ, ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವವರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ವಿಧಾನ ಪರಿಷತ್‌ನಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿದ್ದು. ಇದೀಗ ಮತ್ತೆ ಹಲವರ ರೇಷನ್ ಕಾರ್ಡ್ ರದ್ದಾಗುವ ಆತಂಕವೂ ಎದುರಾಗಿದೆ. ಈ ಹಿಂದೆ ಬಿಪಿಎಲ್ ಕಾರ್ಡ್ ರದ್ದಾಗಿರುವ ಹಲವರು ಈಗಲೂ ರೇಷನ್ ಕಾರ್ಡ್ ಪಡೆದುಕೊಳ್ಳುವುದಕ್ಕೆ ಪರದಾಡುತ್ತಿದ್ದಾರೆ. ಈ ರೀತಿ ಇರುವಾಗಲೇ ಮತ್ತೆ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಶುರುವಾಗಿದೆ. ವಿಧಾನ ಪರಿಷತ್ ಚರ್ಚೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಅವರು ಕೇಳಿರುವ ಪ್ರಶ್ನೆಗೆ ಕೆ.ಎಚ್ ಮುನಿಯಪ್ಪ ಅವರು ಉತ್ತರಿಸಿದ್ದಾರೆ.
ರಾಜ್ಯದಲ್ಲಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಕಳೆದ ಒಂದು ವರ್ಷದಿಂದಲೂ ರಾಜ್ಯದಲ್ಲಿ ಅನಧಿಕೃತ ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರವು ಶಾಕ್ ನೀಡುತ್ತಿದೆ. ಇದೀಗ ಕರ್ನಾಟಕದಲ್ಲಿ ಒಟ್ಟು 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆ ಎಂದು ಗುರುತಿಸಲಾಗಿದೆ. ಒಟ್ಟು 1.10 ಕೋಟಿ ಬಿಪಿಎಲ್ ಕಾರ್ಡ್‌ಗಳನ್ನು ರಾಜ್ಯದಲ್ಲಿ ವಿತರಿಸಲಾಗುತ್ತಿದೆ. ಇದರಲ್ಲಿ ಅಂದಾಜು 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆ ಎಂದು ಸರ್ಕಾರ ಗುರುತಿಸಿದೆ. ಇದೀಗ ಈ ಕಾರ್ಡ್‌ಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ.

ಪರಿಶೀಲನೆ ಮಾಡಿ ಕ್ರಮ: ಇನ್ನು ಅನರ್ಹರು ರೇಷನ್ ಕಾರ್ಡ್ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡುವ ಸಂದರ್ಭದಲ್ಲಿ ಖುದ್ದು ಪರಿಶೀಲನೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ ಹಾಗೂ ಕಂದಾಯ ನಿರೀಕ್ಷಕರು ಇರುವ ಸಮಿತಿಯನ್ನು ರಚನೆ ಮಾಡುವುದಾಗಿ ಸರ್ಕಾರ ಹೇಳಿದೆ.
ಹೊಸ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ಇನ್ನು ಇದೇ ಸಂದರ್ಭದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್‌ದಾರರಿಗೂ ಗುಡ್‌ನ್ಯೂಸ್ ಕೊಡಲಾಗಿದೆ. ಕಳೆದ ಎರಡು ವರ್ಷಗಳಿಂದ ಅಂದರೆ 2023ರಿಂದ ಇಲ್ಲಿಯವರೆಗೆ ರೇಷನ್ ಕಾರ್ಡ್‌ಗಾಗಿ ಒಟ್ಟು 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನುಳಿದ 91 ಸಾವಿರ ಅರ್ಜಿಗಳು ಪರಿಷ್ಕರಣೆ ಮಾಡಲಾಗುತ್ತಿದ್ದು. ಅದರಲ್ಲಿ 60 ಸಾವಿರ ಅನರ್ಹ ಬಿಪಿಎಲ್ ಅರ್ಜಿಗಳಿವೆ ಎಂದಿದ್ದಾರೆ. ಇನ್ನೊಂದು ಎರಡು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವುದಾಗಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದ್ದಾರೆ.












Click it and Unblock the Notifications