ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್: ರೇಷನ್ ಕಾರ್ಡ್ - ಪಿಂಚಣಿ ಯೋಜನೆ ಸೇರಿದಂತೆ ಈ ಸೇವೆಗಳು ಇನ್ಮುಂದೆ ಸಿಂಪಲ್
ಕರ್ನಾಟಕ ಸರ್ಕಾರವು ದೇಶದಲ್ಲಿಯೇ ಇದೇ ಮೊದಲ ಬಾರಿ ವಿನೂತನ ಯೋಜನೆಯೊಂದನ್ನು ರೂಪಿಸಿದ್ದು, ಕಾರ್ಯರೂಪಕ್ಕೆ ತರುವುದುಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸಹ ಮಾಡಿಕೊಂಡಿದೆ. ಕರ್ನಾಟಕ ಸರ್ಕಾರವು ಪ್ರಜಾಸೇವೆ ಆಂದೋಲನವನ್ನು ಪ್ರಾರಂಭಿಸಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಸಮಾಧಾನದ ಪರಿಹಾರ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದೀಗ ಪ್ರಜಾಸೇವೆ ಯೋಜನೆಗೆ ಸಂಬಂಧಿಸಿದಂತೆ ಮತ್ತೊಂದು ಅಪ್ಡೇಟ್ಸ್ ಬಂದಿದೆ.
ಕರ್ನಾಟಕದಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರದಂದು ಪೂಜಾಸೇವೆ ಅಂದೋಲನ ಸಭೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ತಿಂಗಳ ಎಲ್ಲಾ ಶನಿವಾರದಂದು 2ನೇ ಹಾಗೂ 4ನೇ ಶನಿವಾರ ಸೇರಿದಂತೆ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಹಾಗೂ ಹೋಬಳಿ ಮಟ್ಟದ ಪುಜಾಸೇವೆ ಆಂದೋಲನ ಸಭೆಗಳ ಆಯೋಜಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರಜಾಸೇವೆ ಆಂದೋಲನ ಆಯೋಜನೆ
ಇನ್ನು ಕರ್ನಾಟಕ ಸರ್ಕಾರವು ದೇಶದಲ್ಲಿಯೇ ಮೊದಲ ಬಾರಿ ಪ್ರಜಾಸೇವೆ ಆಂದೋಲನವನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳ 1ನೇ ಹಾಗೂ 3ನೇ ಶನಿವಾರ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತ ಮತ್ತು ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲ್ಲೂಕು ಮಟ್ಟದ ಪುಜಾಸೇವೆ ಆಂದೋಲನ ಸಭೆಗಳನ್ನು ನಡೆಸಲಿದ್ದಾರೆ. ಈ ಸಭೆಗಳನ್ನು ಮೊದಲಿಗೆ ಎಲ್ಲಾ ತಾಲ್ಲೂಕು ಕೇಂದ್ರಸ್ಥಾನಗಳಲ್ಲಿ ನಡೆಸಿ ನಂತರ ಎಲ್ಲಾ ಹೋಬಳಿ ಕೇಂದ್ರ ಸ್ನಾನದ ಗ್ರಾಮಗಳಲ್ಲಿ ನಡೆಸಲು ಸೂಚನೆ ನೀಡಲಾಗಿದೆ. ಅಲ್ಲದೆ ಪ್ರತಿ ತಿಂಗಳ 2ನೇ ಹಾಗೂ 4ನೇ ಶನಿವಾರ ತಾಲ್ಲೂಕು ಮಟ್ಟದ ಪುಜಾಸೇವೆ ಆಂದೋಲನ ಸಭೆಗಳನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಜನರ ಮನೆ ಬಾಗಿಲಿಗೆ ಸರ್ಕಾರ
ಜನರ ಮನೆ ಬಾಗಿಲಿಗೆ ಸರ್ಕಾರ ಎನ್ನುವ ಘೋಷಾ ವಾಕ್ಯದೊಂದಿಗೆ ಕರ್ನಾಟಕ ಸರ್ಕಾರವು ಪ್ರಜಾಸೇವೆ ಆಂದೋಲನ ಎನ್ನುವ ಯೋಜನೆಯನ್ನು ಆಯೋಜನೆ ಮಾಡುತ್ತಿದೆ. ಕಷ್ಟ ಹೇಳಿಕೊಂಡು ಬರುವ ಜನಸಾಮಾನ್ಯರಿಗೆ ಸರ್ಕಾರಿ ಅಧಿಕಾರಿಗಳು ಮಾನವೀಯತೆಯಿಂದ ಸ್ಪಂದಿಸಬೇಕು ಹಾಗೂ ಕಾನೂನು ಚೌಕಟ್ಟಿನಲ್ಲಿಯೇ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಜನರ ಕುಂದುಕೊರತೆಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಬಗೆಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಪ್ರಜಾಸೇವೆ ಇಲಾಖೆ ಎಂಬ ಹೊಸ ಸಚಿವಾಲಯವನ್ನು ಆರಂಭಿಸಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿಯೇ ಘೋಷಣೆ ಮಾಡಿದ್ದರು. ಇದೀಗ ಈ ಯೋಜನೆಯು ಕಾರ್ಯರೂಪಕ್ಕೆ ಬರುತ್ತಿದೆ.
ಪ್ರಜಾಸೇವೆ ಏನೆಲ್ಲ ಸೇವೆ ಇರಲಿದೆ
ಪ್ರಜಾಸೇವೆ ಆಂದೋಲನ ಯೋಜನೆಯ ಅಡಿಯಲ್ಲಿ ನೀವು ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಮುಖ್ಯವಾಗಿ ರೇಷನ್ ಕಾರ್ಡ್ ಸಮಸ್ಯೆ, ಪಿಂಚಣಿ ಯೋಜನೆಗಳು, ಪಹಣಿ ಸಮಸ್ಯೆಗಳು, ಖಾತೆ ಬದಲಾವಣೆ, ವಸತಿ ಯೋಜನೆ, ನಿವೇಶನ ಹಂಚಿಕೆ, ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಹಾಗೂ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಗೊಂದಲ ಅಥವಾ ಸಮಸ್ಯೆಗಳು ಇದ್ದರೆ ಜನ ಸಮಾನ್ಯರು ಪ್ರಜಾಸೇವೆಯ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಹೇಳಲಾಗಿದೆ.


Click it and Unblock the Notifications
