Holiday: ರಾಜ್ಯದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 12 ದಿನ ರಜೆ: ಈ ಮಹತ್ವದ ಆದೇಶದಲ್ಲೇನಿದೆ?
Holiday: ರಾಜ್ಯದಲ್ಲಿ ರಜೆ ಕುರಿತು ಅಪ್ಡೇಟ್ ಮಾಹಿತಿಗಳನ್ನು ಹೊರಬೀಳುತ್ತಲಿರುತ್ತವೆ. ಇದೀಗ ಉದ್ಯೋಗಸ್ಥ ಮಹಿಳೆಯರಿಗೆ 12 ಮುಟ್ಟಿನ ರಜೆ ಬಗ್ಗೆ ಕಾರ್ಮಿಕ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಹಿಳಾ ಉದ್ಯೋಗಿಗಳಿಗೆ ಅನುಕೂಲಕ್ಕೆ ತಕ್ಕಂತೆ ಆಗಾಗ ಗುಡ್ ನ್ಯೂಸ್ ಲಭ್ಯ ಆಗುತ್ತಲಿರುತ್ತದೆ. ಇದೀಗ ಕಾರ್ಮಿಕ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಆದೇಶ ಹೊರಡಿಸಿದೆ. ಹಾಗೆಯೇ ಇದಕ್ಕೆ ಕೆಲವು ಷರತ್ತುಗಳು ಸಹ ಇವೆ. ಹಾಗಾದ್ರೆ ಅವುಗಳುಗಳು ಯಾವುವು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ ಆಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಮುಟ್ಟಿನ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲಾ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕೆಂದು ಸೂಚನೆ ನೀಡಿದೆ.
ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜೊತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು. ನಂತರ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಹ ದೊರೆದಿತ್ತು.
ಈ ಹಿನ್ನೆಲೆ ಇದೀಗ ಆದೇಶ ಹೊರಡಿಸಿರುವ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಸುಮ ಅವರು, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿ ಆಗಿರುವ ಎಲ್ಲಾ ಕೈಗಾರಿಕೆಗಳು, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲರಿಗೂ ಇದು ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಷರತ್ತುಗಳ ವಿವರ ಹೀಗಿದೆ
* ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಕೆ ಮಾಡಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತಣೆ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ.
* ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೀಗೆ ಮಹಿಳೆಯರಿಗೆ ಅನುಕೂಲವಾಗುವಂತೆ ರಾಜ್ಯ ಕಾರ್ಮಿಕ ಇಲಾಖೆ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಮೂಲಕ ಎಲ್ಲಾ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ.












Click it and Unblock the Notifications