Foeticide : ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ

ಬೆಂಗಳೂರು, ನವೆಂಬರ್ 30: ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಪ್ರಕರಣವನ್ನು ಬೆಂಗಳೂರಿನ ಪೊಲೀಸರು ಬೇದಿಸಿದ್ದರು. ರಾಜ್ಯದ ನಾನಾ ಕಡೆಗಳಲ್ಲಿ ಭ್ರೂಣ ಹತ್ಯೆ ನಡೆಸಿರುವುದು ಬೆಳಕಿಗೆ ಬಂದಿದ್ದು, ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಿಷೇಧ ನಿಯಮ ಜಾರಿಯಲ್ಲಿದ್ದರೂ ಸಹಿತ ನೂರಾರು ಹೆಣ್ಣು ಭ್ರೂಣಗಳು ಕಳೆದ ಕೆಲವು ವರ್ಷಗಳಿಂದಲೂ ನಡೆದಿವೆ. ಇಂತಿಷ್ಟು ಹಣ ಪಡೆದು ದಂಧೆ ನಡೆಸುತ್ತಿದ್ದರು. ಆ ದಂಧೆಯನ್ನು ಬೆಂಗಳೂರು ಪೊಲೀಸರು ಬೇಧಿಸಿ ಸುಮಾರು 9 ಮಂದಿಯನ್ನು ಬೇಧಿಸಿದ್ದರು.

Karnataka Government Hand Over Fetal Death Case Probe to CID

ಈ ಕುರಿತು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಚರ್ಚಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ. ಈ ಮೂಲಕ ಪ್ರಕರಣವು ಇನ್ನೆಲ್ಲಿಯವರೆಗೆ ವ್ಯಾಪಿಸಿದೆ ಎಂಬುದು ತಿಳಿಯಲಿದೆ.

9 ಆರೋಪಿಗಳ ಬಂಧನ

ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರ ಕರಣ ನಡೆದಿದೆ. ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಕಳೆದ ಮೂರು ವರ್ಷಗಳಲ್ಲಿ ಒಟ್ಟು 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾಗಿ ತನಿಖೆಯಿಂದ ಬಯಲಾಗಿದೆ.

ಮೈಸೂರು ವ್ಯಾಪ್ತಿಯಲ್ಲಿ ಜಾಲ ಬೇದಿಸಿದ ಪೊಲೀಸರು ಕ್ಲಿನಿಕ್ ನಲ್ಲಿನ ಚಿಕಿತ್ಸಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರಿಜಿಸ್ಟ್ರಾರ್ ನಲ್ಲಿದ್ದ ಹೆಸರು, ವಿಳಾಸ ಪಡೆದ ಪೊಲೀಸರು ಕೆಲವರನ್ನು ವಿಚಾರಿಸಿದ್ದಾರೆ. ಇದರಲ್ಲಿ ಮಂಡ್ಯ, ರಾಮನಗರ, ಮೈಸೂರಿನವರು ಹೆಚ್ಚಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+