ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು! ಕ್ಯಾಬಿನೆಟ್‌ ನಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು, ಜನವರಿ 18 : ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.

ಈ ಕುರಿತು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವ ತೀರ್ಮಾನವನ್ನ ಕೈಗೊಳ್ಳಲಾಗಿದೆ.

Karnataka Government Hands Over Internal Reservation To Central Government

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿರುವ ಎಚ್​ಕೆ ಪಾಟೀಲ್ ಹಾಗೂ ಹೆಚ್​ಸಿ ಮಹಾದೇವಪ್ಪ ಮಾತನಾಡಿ, ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮಾಹಿತಿ ನೀಡಿದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮೇರೆಗೆ ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದ್ದು, ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಎರಡು ದಶಕಗಳಿಂದ ದಲಿತರ ಒಳ‌ಪಂಗಡಗಳು ಅನ್ಯಾಯ ಆಗಿದೆ ಒಳಮೀಸಲಾತಿ ಬೇಕು ಎಂದು ಕೇಳುತ್ತಿದ್ದರು. ಹೀಗಾಗಿ ನ್ಯಾ.ಸದಾಶಿವ ಆಯೋಗದ ವರದಿ ನೀಡಲು ಸರ್ಕಾರ ಕೇಳಿತ್ತು. ಸದಾಶಿವ ಆಯೋಗದ ವರದಿ ಅಸೆಂಬ್ಲಿಯಲ್ಲಿ ಪ್ಲೇಸ್ ಆಗಲೇ ಇಲ್ಲ. ಸದಾಶಿವ ಆಯೋಗದ ವರದಿಯನ್ನು ನಾವು ಅಧಿಕಾರಕ್ಕೆ ಬಂದಾಗ ಮಂಡನೆ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹಾಕಿದ್ದೆವು. ಬಿಜೆಪಿಯ ಸರ್ಕಾರ ತರಾತುರಿಯಲ್ಲಿ ಕಾನೂನು ಸಚಿವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದರು. ನ್ಯಾ.ಸದಾಶಿವ ಆಯೋಗದ ವರದಿ ಕಮಿಟಿ ಅಪ್ರಸ್ತುತ ಹಾಗೂ ಮುಕ್ತಾಯ ಆಗಿದೆ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿದರು ಎಂದು ತಿಳಿಸಿದ್ದಾರೆ.

2011 ಜನಸಂಖ್ಯೆ ಆಧಾರದ ಮೇಲೆ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ವರದಿ ನೀಡಲಾಗಿತ್ತು ಸಂವಿಧಾನದ ಆರ್ಟಿಕಲ್ 341ಕ್ಕೆ ಖಂಡ (3) ನ್ನು ಸೇರಿಸದೇ ಹೋದರೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಪಾರ್ಲಿಮೆಂಟ್ ಮೂಲಕವೇ ಇದು ಆಗಬೇಕು. ರಾಜ್ಯ ಸರ್ಕಾರ ಇದನ್ನು ಮಾಡಲು ಸಾಧ್ಯವೇ ಇಲ್ಲ. ರಿಜೆಕ್ಟ್ ಆಗಿರುವ ವರದಿಯನ್ನು ನಾವು ಕ್ಯಾಬಿನೆಟ್ ಗೆ ತರಲು ಸಾಧ್ಯವಿಲ್ಲ. 101 ಜಾತಿಗಳ ಹಿತ ಕಾಪಾಡಲು ಆರ್ಟಿಕಲ್ 341ಗೆ ತಿದ್ದುಪಡಿ ತನ್ನಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+