ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ವಿವಿ ಆವರಣದಲ್ಲಿ ಅಮೆರಿಕ ವಿವಿ ಕಚೇರಿ ಶೀಘ್ರ ಆರಂಭ

|
Google Oneindia Kannada News

ಬೆಂಗಳೂರು, ಜ. 29: ಉತ್ತಮ ಗುಣಮಟ್ಟದ ಶಿಕ್ಷಣ ರಾಜ್ಯದ ವಿದ್ಯಾರ್ಥಿಗಳಿಗೆ ಸಿಗುವಂತೆ ಮಾಡಲು ಅಮೆರಿಕದ ವಿಶ್ವವಿದ್ಯಾಲಯದ ಜೊತೆಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ನಮ್ಮ ವಿಶ್ವವಿದ್ಯಾಲಯಗಳ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯ ಮುಂದೆ ಬಂದಿದೆ.

ಉನ್ನತ ಶಿಕ್ಷಣ ಇಲಾಖೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ ಅವರನ್ನು ವಿಕಾಸಸೌಧದ ಕಚೇರಿಯಲ್ಲಿ ಬುಧವಾರ ಭೇಟಿ ಮಾಡಿದ ಇಲಿನಾಯ್ಸ್ ವಿಶ್ವವಿದ್ಯಾಲಯದ ಅಧ್ಯಕ್ಷ ತಿಮೋಟಿ ಕಿಲೆನ್ ನೇತೃತ್ವದ ತಂಡ ಮಾತುಕತೆ ನಡೆಸಿದೆ.

ಡಿಸಿಎಂ ಡಾ. ಅಶ್ವಥನಾರಾಯಣ ಮಾಧ್ಯಮದವರಿಗೆ ಕೈಮುಗಿದಿದ್ದು ಯಾಕೇ?ಡಿಸಿಎಂ ಡಾ. ಅಶ್ವಥನಾರಾಯಣ ಮಾಧ್ಯಮದವರಿಗೆ ಕೈಮುಗಿದಿದ್ದು ಯಾಕೇ?

ರಾಜ್ಯದ ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯದ ಜತೆ ಮೂರು ವರ್ಷಗಳಿಂದ ಇಲಿನಾಯ್ಸ್ ವಿಶ್ವವಿದ್ಯಾಲಯ ಕೆಲಸ ಮಾಡುತ್ತಿದ್ದು, ಈಗ ಇತರ ವಿಶ್ವವಿದ್ಯಾಲಯಗಳ ಜತೆಗೂ ಕೆಲಸ ಮಾಡಲು ಮುಂದೆ ಬಂದಿದೆ. ಇಲಿಯಾನ್ಸ್ ವಿಶ್ವವಿದ್ಯಾಲಯದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡ ಸ್ವಾಗತಿಸಿದೆ.

ನೋಡಲ್ ಅಧಿಕಾರಿ ನೇಮಕ

ನೋಡಲ್ ಅಧಿಕಾರಿ ನೇಮಕ

ಶಿಕ್ಷಣ, ತಂತ್ರಜ್ಞಾನ, ಕೌಶಲ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ತಂತ್ರಜ್ಞಾನ, ದೂರಶಿಕ್ಷಣ, ಕೃಷಿ ಮುಂತಾದ ಕ್ಷೇತ್ರಗಳಲ್ಲಿ ಇಲಿನಾಯ್ಸ್ ವಿಶ್ವವಿದ್ಯಾಲಯದ ಜತೆ ಕೆಲಸ ಮಾಡಲು ಆಸಕ್ತಿ ಇದೆ. ವಿಶ್ವಮಟ್ಟದ ಉನ್ನತ ಶಿಕ್ಷಣ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೂ ಸಿಗಲಿ ಎನ್ನುವ ಕಾರಣಕ್ಕೆ ಈ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ ತಮ್ಮ ಕಾರ್ಯದರ್ಶಿ ಪ್ರದೀಪ್ ಅವರನ್ನು ಕೂಡಲೇ ಜಾರಿ ಬರುವಂತೆ ನೋಡಲ್ ಅಧಿಕಾರಿಯಾಗಿ ನೇಮಿಸುವುದಾಗಿ ಸಚಿವರು ನಿಯೋಗದ ಭೇಟಿ ಬಳಿಕ ತಿಳಿಸಿದ್ದಾರೆ.

ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಕೂಡ ನೋಡಲ್ ಅಧಿಕಾರಿಯನ್ನು ನೇಮಿಸಲು ಸ್ಥಳದಲ್ಲೇ ಒಪ್ಪಿಗೆ ಸೂಚಿಸಿದ್ದಾರೆ.

ಬೆಂಗಳೂರು ಸೆಂಟ್ರಲ್ ವಿವಿ ಆವರಣದಲ್ಲಿ ಇಲಿನಾಯ್ಸ್ ಕಚೇರಿ

ಬೆಂಗಳೂರು ಸೆಂಟ್ರಲ್ ವಿವಿ ಆವರಣದಲ್ಲಿ ಇಲಿನಾಯ್ಸ್ ಕಚೇರಿ

ಬೆಂಗಳೂರು ಸೆಂಟ್ರಲ್ ವಿಶ್ವವಿದ್ಯಾಲಯದ ಆವರಣದಲ್ಲಿ ಇಲಿನಾಯ್ಸ್ ವಿಶ್ವವಿದ್ಯಾಲಯದ ಕಚೇರಿ ತೆರೆಯಲು ಜಾಗ ನೀಡುವುದಕ್ಕೆ ರಾಜ್ಯ ರ್ಸಾರ ಒಪ್ಪಿಕೊಂಡಿದೆ. ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಸೂಚಿಸಿದ್ದಾರೆ.

ಬೀದರ್; ಮೋದಿಗೆ ಅವಮಾನ; ಶಿಕ್ಷಣ ಸಂಸ್ಥೆ ಮೇಲೆ ಕೇಸುಬೀದರ್; ಮೋದಿಗೆ ಅವಮಾನ; ಶಿಕ್ಷಣ ಸಂಸ್ಥೆ ಮೇಲೆ ಕೇಸು

ಉತ್ಕಷ್ಟ ಗುಣಮಟ್ಟದ ಶಿಕ್ಷಣವನ್ನು ನಮ್ಮ ರಾಜ್ಯದ ಮಕ್ಕಳಿಗೂ ಸಿಗುವಂತಾಗಬೇಕು ಎನ್ನುವ ಉದ್ದೇಶದಿಂದ ಹೊಸ ಹೊಸ ಆವಿಷ್ಕಾರಗಳತ್ತ ಮುಖ ಮಾಡುತ್ತಿದ್ದೇವೆ. ಇದರ ಒಂದು ಭಾಗವಾಗಿ ವಿದೇಶಿ ವಿಶ್ವವಿದ್ಯಾಲಯಗಳ ಜತೆಗೂ ಒಡಂಬಡಿಕೆ ಮಾಡಿಕೊಳ್ಳುತ್ತಿದ್ದು, ಇದು ಮುಂದುವರಿಯಲಿದೆ ಎಂದು ನಿಯೋಗದ ಭೇಟಿ ಬಳಿಕ ಡಾ. ಅಶ್ವಥನಾರಾಯಣ ಹೇಳಿದ್ದಾರೆ.

ಎಂ.ಎಸ್. ರಾಮಯ್ಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎಂ.ಆರ್. ಜಯರಾಮ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಸೇರಿದಂತೆ ಇತರರು ಸಭೆಯಲ್ಲಿ ಹಾಜರಿದ್ದರು.

ಇಂಗ್ಲಂಡ್ ಸರ್ಕಾರದಿಂದ 19 ಕೋಟಿ ರೂ. ನೆರವು

ಇಂಗ್ಲಂಡ್ ಸರ್ಕಾರದಿಂದ 19 ಕೋಟಿ ರೂ. ನೆರವು

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಸಂಶೋಧನೆ ಮಾಡುವ ಸಲುವಾಗಿ ಇಂಗ್ಲೆಂಡ್ ಸರ್ಕಾರ 19 ಕೋಟಿ ರೂಪಾಯಿ ನೆರವು ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥನಾರಾಯಣ ಇದೇ ಸಣದರ್ಭದಲ್ಲಿ ಮಾಹಿತಿ ಕೊಟ್ಟಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ನೇತೃತ್ವದ ತಂಡ ಇತ್ತೀಚೆಗೆ ಇಂಗ್ಲೆಂಡ್‍ನ ಸಾಲ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಇದಕ್ಕ ಒಪ್ಪಿಗೆ ಸಿಕ್ಕಿತ್ತು. ಇದಕ್ಕೆ ಪೂರಕವಾಗಿ ಸಂಶೋಧನೆಗೆ ಸಂಬಂಧಿಸಿದ ಪ್ರಾಥಮಿಕ ವರದಿಗಳನ್ನು ಸಲ್ಲಿಸುವ ಕೆಲಸ ಆರಂಭವಾಗಿದ್ದು, 3 ತಿಂಗಳಲ್ಲಿ ಹಣ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ವಿದೇಶಿ ವಿ.ವಿ.ಗಳ ಸೆಂಟರ್‌ಗಳ ಸ್ಥಾಪನೆ ಉತ್ತಮ

ವಿದೇಶಿ ವಿ.ವಿ.ಗಳ ಸೆಂಟರ್‌ಗಳ ಸ್ಥಾಪನೆ ಉತ್ತಮ

ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗ್ತಿದೆ. ಇಂತಹ ಕಾಲದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ರಾಜ್ಯದಲ್ಲಿ ತಮ್ಮ ಕಚೇರಿ ತೆರೆಯುತ್ತಿರುವುದು ಉತ್ತಮ ಬಳವಣಿಗೆ. ಆದರೆ ವಿದೇಶ ಶಿಕ್ಷಣ ವ್ಯಾಪಾರೀಕರಣ ಆಗಬಾರದು ಎಂದು ವಿಧ್ಯಾರ್ಥಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆ 126 ಹುದ್ದೆಗಳಿವೆಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆ 126 ಹುದ್ದೆಗಳಿವೆ

ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಗುಣಮಟ್ಟ ಅಲ್ಲಿನಂತಿಯೆ ಇರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

English summary
The State Government has agreed to provide space for the University of Illinois at Bangalore Central University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X