ಕಾರ್ಮಿಕರ ಬೆನ್ನಿಗೆ ನಿಂತ ಸರ್ಕಾರ: ವೇತನ ಪಾವತಿ ಮಾಡುವಂತೆ ಮನವಿ
ಬೆಂಗಳೂರು, ಮೇ 1: ಕೋವಿಡ್-19 ತಡೆಗಟ್ಟಲು ಘೋಷಿಸಿದ ಲಾಕ್ ಡೌನ್ ನಿಂದಾಗಿ ಶ್ರಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಜೊತೆಗೆ ರಾಜ್ಯದ ಆರ್ಥಿಕ ವ್ಯವಸ್ಥೆ ಕೂಡ ಹದಗೆಟ್ಟಿತ್ತು. ಹೀಗೆ, ತೊಂದರೆಗೆ ಸಿಲುಕಿದ್ದ ಜನಜೀವನ ಮತ್ತು ಅರ್ಥ ವ್ಯವಸ್ಥೆಯನ್ನು ಹಿಂದಿನ ಮಾದರಿಗೆ ಅನುಸರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರ ಭಾಗವಾಗಿ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದ್ದು, ಸರ್ಕಾರ ಕಾರ್ಮಿಕರ ಹಿತ ಕಾಪಾಡಲು ತೀರ್ಮಾನಿಸಿದೆ.
Recommended Video
ಕಾರ್ಮಿಕರ ದಿನಾಚರಣೆಯ ಅಂಗವಾಗಿ, ಟ್ವೀಟ್ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಲಿರುವ ಕಾರ್ಮಿಕ ವರ್ಗಕ್ಕೆ ಭರವಸೆ ತುಂಬುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಕಾರ್ಮಿಕರ ವೇತನ ನೀಡುವಂತೆ ವಾಣಿಜ್ಯೋದ್ಯಮಿಗಳಲ್ಲಿ ಮನವಿ ಮಾಡಿರುವ ಬಗ್ಗೆಯೂ ತಿಳಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರು, ಕೋವಿಡ್19 ಸೋಂಕಿನಿಂದ ಉಂಟಾಗಿರುವ ಕಠಿಣ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರ ಬೆನ್ನಿಗೆ ನಿಂತಿದ್ದು, ಯಾರೂ ಕೂಡ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.#ಮನೆಯಲ್ಲೇಇರಿ#KarnatakaFightsCorona#IndiaFightsCorona#SaluteCOVIDFighters pic.twitter.com/MN8n8pqklH
— CM of Karnataka (@CMofKarnataka) May 1, 2020
''ಕೋವಿಡ್-19 ಸೋಂಕಿನಿಂದ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದವು. ಇದರಿಂದ ದುಡಿದು ತಿನ್ನುವ ಕಾರ್ಮಿಕರು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ.''
''ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ.''

''ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ ಬಿ.ಎಸ್.ಯಡಿಯೂರಪ್ಪ.












Click it and Unblock the Notifications