188 ಕೈದಿಗಳನ್ನು ಗಣರಾಜ್ಯೋತ್ಸವ ದಿನದಂದು ಬಿಡುಗಡೆಗೆ ನಿರ್ಧಾರ

Written By: Ramesh
Subscribe to Oneindia Kannada

ಬೆಂಗಳೂರು, ಜನವರಿ. 19 : ಸುಪ್ರೀಂಕೋರ್ಟ್ ಮಾರ್ಗಸೂಚಿ ಅನುಸಾರ ಪ್ರಸಕ್ತ ವರ್ಷ ಗಣರಾಜ್ಯೋತ್ಸವ (ಜನವರಿ 26) ದಿನದಂದು ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 188 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ರಾಜ್ಯದ ಬೆಂಗಳೂರು, ಮಂಗಳೂರು, ಬೆಳಗಾವಿ, ಧಾರವಾಡ, ವಿಜಯಪುರ ಹಾಗೂ ಬಳ್ಳಾರಿ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 149 ಪುರುಷ, 8 ಮಹಿಳಾ ಹಾಗೂ ಇನ್ನುಳಿದ ವಯೋವೃದ್ಧ ಕೈದಿಗಳು ಸೇರಿದಂತೆ ಒಟ್ಟು 188 ಜನರನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Karnataka government has decided to release 188 prisoners on Republic Day

ಅಂಗನವಾಡಿ ಕೇಂದ್ರಗಳ ಫಲಾನುಭವಿಗಳ ಉಪಯೋಗಕ್ಕಾಗಿ ಔಷಧಿ ಕಿಟ್‌ಗಳನ್ನು ಖರೀದಿಸಲು ರಾಜ್ಯ ಸರ್ಕಾರ 6.42 ಕೋಟಿ ರು. ಬಿಡುಗಡೆ ಮಾಡಿದೆ.

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಬನಪ್ಪ ಅವರನ್ನು ಭ್ರಷ್ಟಾಚಾರ ಪ್ರಕರಣದಡಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹಾಗೂ ಯಾದಗಿರಿ ಜಿಲ್ಲೆಯ ಬಾಳಚಕ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ದ್ವಿತಿಯ ದರ್ಜೆ ಸಹಾಯಕ ಅಬ್ದುಲ್ ರವೂಫ್ ಅವರಿಗೆ ಶೇ.50ರಷ್ಟು ನಿವೃತ್ತಿ ವೇತನ ಶಾಶ್ವತ ಕಡಿತಗೊಳಿಸಲು ಸಂಪುಟ ತೀರ್ಮಾನಿಸಿದೆ ಎಂದು ಜಯಚಂದ್ರ ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government has decided to release 188 prisoners. Supreme Court allowed the state governments to release prisoners on the occasion of Republic day.
Please Wait while comments are loading...