ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ : ಯಡಿಯೂರಪ್ಪ

|
Google Oneindia Kannada News

Recommended Video

ಕರ್ನಾಟಕ ಸರ್ಕಾರಕ್ಕೆ ಬಹುಮತ ಇಲ್ಲ ಎಂಬ ಹೇಳಿಕೆ ಕೊಟ್ಟ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಂಗಳೂರು, ಫೆಬ್ರವರಿ 07 : 'ಕರ್ನಾಟಕ ಸರ್ಕಾರಕ್ಕೆ ಬಹುಮತವಿಲ್ಲ. ಅಧಿಕಾರದಲ್ಲಿ ಮುಂದುವರೆಯಲು ಅವರಿಗೆ ನೈತಿಕ ಹಕ್ಕಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿವೆ. ಪ್ರತಿಪಕ್ಷ ಬಿಜೆಪಿ ಸತತ ಎರಡು ದಿನವೂ ವಿಧಾನಸಭೆ ಕಲಾಪಕ್ಕೆ ಅಡ್ಡಿ ಪಡಿಸಿದೆ. ಸರ್ಕಾರಕ್ಕೆ ಬಹುಮತವಿಲ್ಲ ಎಂದು ಸದನದ ಬಾವಿಗಿಳಿದು ಹೋರಾಟ ನಡೆಸಿದೆ.

ಸದನದಲ್ಲಿ ಮುಂದುವರಿದ ಬಿಜೆಪಿ ಗದ್ದಲ, ಕಲಾಪ ಮುಂದೂಡಿಕೆಸದನದಲ್ಲಿ ಮುಂದುವರಿದ ಬಿಜೆಪಿ ಗದ್ದಲ, ಕಲಾಪ ಮುಂದೂಡಿಕೆ

ಗುರುವಾರ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿಯ ಸದಸ್ಯರು ಧರಣಿ ಆರಂಭಿಸಿದರು. ಆಗ ಸ್ಪೀಕರ್ ರಮೇಶ್ ಕುಮಾರ್ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು. ಬಳಿಕ ಸದನ ಆರಂಭವಾದಾಗ ಗದ್ದಲ ಮುಂದುವರೆಯಿತು.

ಕುಮಾರಸ್ವಾಮಿ ಸರ್ಕಾರ ಬೀಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಖಡಕ್ ಸೂಚನೆ?ಕುಮಾರಸ್ವಾಮಿ ಸರ್ಕಾರ ಬೀಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಖಡಕ್ ಸೂಚನೆ?

ಬಿಜೆಪಿ ಸದಸ್ಯರ ಗದ್ದಲ ಹೆಚ್ಚಾದ ಕಾರಣ ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪವನ್ನು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮುಂದೂಡಿದರು. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಅರ್ಥಹೀನ, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ : ಶ್ರೀರಾಮುಲುಬಜೆಟ್ ಅಧಿವೇಶನ ಅರ್ಥಹೀನ, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ : ಶ್ರೀರಾಮುಲು

ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಹೇಳಿದ್ದೇನು?

'ಕರ್ನಾಟಕ ಸರ್ಕಾರಕ್ಕೆ ಬಹುಮತವಿಲ್ಲ. ಅವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯೂ ಇಲ್ಲ. ನಾವು ನಾಳೆ (ಶುಕ್ರವಾರ) ಸಹ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸದನದಲ್ಲಿ ಬಿಜೆಪಿ ಗದ್ದಲ

ಸದನದಲ್ಲಿ ಬಿಜೆಪಿ ಗದ್ದಲ

ಗುರುವಾರ ಬೆಳಗ್ಗೆ 11ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಸರ್ಕಾರಕ್ಕೆ ಬಹುಮತವಿಲ್ಲ ಎಂದು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಗಳಿದು ಗದ್ದಲ ಎಬ್ಬಿಸಿದರು. ಆದ್ದರಿಂದ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಬಳಿಕ ಮತ್ತೆ ಕಲಾಪ ಆರಂಭವಾದರೂ ಬಿಜೆಪಿ ಸದಸ್ಯರ ಧರಣಿ ಮುಂದುವರೆಯಿತು. ಆದ್ದರಿಂದ, ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ಶುಕ್ರವಾರವೂ ಪ್ರತಿಭಟನೆ

ಶುಕ್ರವಾರವೂ ಪ್ರತಿಭಟನೆ

'ಶುಕ್ರವಾರವೂ ಧರಣಿ ಮುಂದುವರೆಸುತ್ತೇವೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ 12.30ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಶುಕ್ರವಾರ ಬಿಜೆಪಿ ತಂತ್ರವೇನು?

ಶುಕ್ರವಾರ ಬಿಜೆಪಿ ತಂತ್ರವೇನು?

ಶುಕ್ರವಾರ ಬಜೆಟ್ ಮಂಡನೆ ವೇಳೆ ಬಿಜೆಪಿ ತಂತ್ರವೇನು?. ಬಜೆಟ್ ಮಂಡನೆ ಮಾಡುವಾಗ ಎಲ್ಲಾ ಸದಸ್ಯರಿಗೂ ಬಜೆಟ್ ಪ್ರತಿ ನೀಡಬೇಕು. ಬಜೆಟ್ ಪ್ರತಿ ನೀಡಿದರೆ ಮಂಡನೆಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಪ್ರತಿಭಟನೆ ಮುಂದುವರೆಸಲು ಬಿಜೆಪಿ ತೀರ್ಮಾನಿಸಿದೆ.

English summary
Karnataka government have no majority and they have no moral right to stay in the government. We will continue our protest tomorrow said Karnataka BJP president H.D.Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X