ಸರ್ಕಾರದಿಂದ ಮನೆ ಹಂಚಿಕೆ: ಇನ್ಮುಂದೆ ಮುಸ್ಲೀಮ್ ಸಮುದಾಯದವರಿಗೆ ಸಿಗುವ ಲಾಭಗಳೇನು ?
ಕರ್ನಾಟಕ ಸರ್ಕಾರವು ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಟೀಕೆಗೆ ಗುರಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಇಲಾಖೆಯ ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಲು ನಿರ್ಧರಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನೆ ಮಾಡಿ ನಾವು ಕಾನೂನು ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ಹೇಳಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಇತರೆ ವರ್ಗ, ಸಮುದಾಯಗಳಿಗೆ ಅನ್ಯಾಯವಾಗಲಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯ ವಿರುದ್ಧ ನಾವು ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ. ಸಂವಿಧಾನಕ್ಕೆ ಅಪಚಾರ ಬಗೆಯಲು ಸದಾ ಸಿದ್ಧ ಕರ್ನಾಟಕ ಕಾಂಗ್ರೆಸ್ ಸರ್ಕಾರ. ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ. ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ ಶೇ 15 ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹೋಗಿ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿರುವ ಕಾಂಗ್ರೆಸ್ ಈ ವಿಷಯದಲ್ಲಿಯೂ ಸಹ ಛೀಮಾರಿ ಹಾಕಿಸಿಕೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ.
ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ. ಚುನಾವಣೆಯಲ್ಲಿ ಗೆದ್ದು ಬರುವಾಗ ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್ದ ಕಾಂಗ್ರೆಸ್ಸಿಗರು ನಮ್ಮದೇನಿದ್ದರೂ ಮುಸ್ಲಿಂ ಸಮುದಾಯದ ಉತ್ತೇಜನದ ಆಡಳಿತ ಎನ್ನುವುದನ್ನೀಗ ಪ್ರತಿಬಿಂಬಿಸುತ್ತಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಎಂದೂ ಇಂತಹ ತಾರತಮ್ಯಕ್ಕೆ ಅವಕಾಶ ಕೊಡಲಿಲ್ಲ, ಕರ್ನಾಟಕದಲ್ಲಿ 'ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲಿನ'ಆಡಳಿತ ನೀಡಿದೆ. ಕೇಂದ್ರದ ಹೆಮ್ಮೆಯ ನರೇಂದ್ರ ಮೋದಿ ಅವರ ಸರ್ಕಾರ ಇಂದಿಗೂ ಕೂಡ ವರ್ಗ ಬೇಧಕ್ಕೆ ಅವಕಾಶ ನೀಡದಂತೆ ಎಲ್ಲರನ್ನೂ ಒಳಗೊಂಡ ಯೋಜನೆಗಳನ್ನು ರೂಪಿಸಿದೆ, ಜಾರಿಗೊಳಿಸುತ್ತಿದೆ, ಆದರೆ ಕರ್ನಾಟಕದಲ್ಲಿ ಏಕೆ ಹೀಗೆ ?ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂದು ಸಂಪುಟ ತೆಗೆದುಕೊಂಡಿರುವ ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಯ ಹೆಚ್ಚಳವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ನಿರಂತರ ವೈಫಲ್ಯಗಳು, ಮೇಲಿಂದ ಮೇಲೆ ಹೊರ ಬರುತ್ತಿರುವ ಹಗರಣಗಳು, ಭ್ರಷ್ಟಾಚಾರಗಳು ಹಾಗೂ ಹೊಣೆಗೇಡಿತನದ ಆಡಳಿತದ ಪರಿಣಾಮ ಕ್ರಿಕೆಟ್ ಕಾಲ್ತುಳಿತದಲ್ಲಿ ಜನರು ಸಾವು,ನೋವು ಅನುಭವಿಸಿದ ರಾಜ್ಯ ಕಂಡ ಬಹುದೊಡ್ಡ ದುರಂತದ ಪ್ರಕರಣದಿಂದ ಜನರ ದೃಷ್ಟಿ ಬೇರೆಡೆ ಸೆಳೆಯಲು ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ. ಇದನ್ನು ಸಹಿಸಿಕೊಂಡು ಕೂರುವ ಪ್ರಶ್ನೆಯೇ ಇಲ್ಲ, ಭಾರತೀಯ ಜನತಾ ಪಾರ್ಟಿಯು ಜನಾಕ್ರೋಶವನ್ನು ಬೆಂಬಲಿಸಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದಿದ್ದಾರೆ.
ಮನೆ ಹಂಚಿಕೆ: ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಇಲಾಖೆಯ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರಿಗೆ 15% ಮೀಸಲಾತಿ ನೀಡಲು ನಿರ್ಧರಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಸರ್ಕಾರದ ಕೆಲವು ನಿರ್ದಿಷ್ಟ ಯೋಜನೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ಸುಲಭವಾಗಿ ಮನೆ ಸಿಗಲಿದೆ. ಹಂಚಿಕೆಯಾಗುವ ಮನೆಗಳಲ್ಲಿ ಮೀಸಲಾತಿ ಈ ಸಮುದಾಯಕ್ಕೂ ಇರಲಿದೆ.












Click it and Unblock the Notifications