Movie Tickets Price : ಕನ್ನಡಿಗರಿಗೆ ಗುಡ್ನ್ಯೂಸ್; ಮೂವಿ ಟಿಕೆಟ್ಗೆ ದರ ಫಿಕ್ಸ್: ಪರಭಾಷಾ ಸಿನಿಮಾಗಳ ಲೂಟಿಗೆ ಬಿತ್ತು ಬ್ರೇಕ್
ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯದಲ್ಲಿ ದುಬಾರಿಯಾಗಿದ್ದ ಸಿನಿಮಾ ಟಿಕೆಟ್ ಬೆಲೆಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಸಿನಿಪ್ರಿಯರಿಗೆ ಇದು ಗುಡ್ ನ್ಯೂಸ್ ಆಗಿದ್ದು, ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.
ಹೌದು, ಕರ್ನಾಟಕದಲ್ಲಿ ಮೂವಿಗಳ ಟಿಕೆಟ್ ದರಗಳ ಬಗ್ಗೆ ಬಹಳ ಹಿಂದಿನಿಂದಲೇ ಸಿನಿ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸುತ್ತಲೇ ಇದ್ದಾರೆ. ಸಿನಿ ಪ್ರೇಮಿಗಳು ಟಿಕೆಟ್ ದರ ಇಳಿಕೆಯಾದರೆ ಸಾಕು ಎಂದು ಕಾಯುತ್ತಿರುವಾಗಲೇ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಕೊನೆಗೂ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ಮಲ್ಟಿಪ್ಲೆಕ್ಸ್,ಹಾಗೂ ಚಿತ್ರಮಂದಿರಗಳಲ್ಲಿ ಏಕರೂಪ ದರ ಜಾರಿಗೆ ಬರಲಿದೆ. ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ200 ರೂ ನಿಗದಿ ಮಾಡಿ ಸರ್ಕಾರದ ಆದೇಶ ನೀಡಿದೆ.

ಈಗಾಗಲೇ ಪರ ಭಾಷೆಗಳ ಅಬ್ಬರದ ನಡುವೆ ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿಯನ್ನ ಲೂಟಿ ಮಾಡುತ್ತಿವೆ. ಪರಭಾಷೆ ಸಿನಿಮಾಗಳ ಟಿಕೆಟ್ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಹೀಗಾಗಿ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು. ಇದೀಗ ತೆರಿಗೆ ಸೇರಿದಂತೆ ಟಿಕೆಟ್ ದರ 200 ನಿಗದಿ ಮಾಡಿ ಸರ್ಕಾರ ಆದೇಶ ನೀಡಿದ್ದು, ಇಂದಿನಿಂದಲೇ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಸರ್ಕಾರ ಆದೇಶ ನೀಡಿದ್ದು, ಕೊನೆಗೂ ಪರಭಾಷ ಚಿತ್ರಗಳ ಲೂಟಿಯಿಂದ ಪ್ರೇಕ್ಷಕರ ಕಾಪಾಡಿದ ಸರ್ಕಾರ ಕನ್ನಡ ಸಿನಿ ಪ್ರೇಕ್ಷಕರಿಗೆ ಗುಡ್ನ್ಯೂಸ್ ಕೊಟ್ಟಿದೆ.
ಇನ್ನೂ ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದ್ದು, ಆದೇಶದ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್ನಲ್ಲಿ ಟಿಕೆಟ್ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಕರ್ನಾಟಕ ಸಿನಿಮಾ (ನಿಯಂತ್ರಣ) ಕಾಯ್ದೆ, 1964 (ಕರ್ನಾಟಕ ಕಾಯ್ದೆ ಸಂಖ್ಯೆ 23, 1964) ರ ಸೆಕ್ಷನ್ 19 ರ ಮೂಲಕ ನೀಡಲಾಗಿರುವ ಅಧಿಕಾರದಡಿಯಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ಸಿನಿಮಾ (ನಿಯಂತ್ರಣ) ನಿಯಮಗಳು, 2014 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಕರಡು ನಿಯಮಗಳನ್ನು ರೂಪಿಸಿದೆ.












Click it and Unblock the Notifications