Ragi malt: ಸರ್ಕಾರಿ ಶಾಲೆ ಮಕ್ಕಳಿಗೆ 'ರಾಗಿ ಮಾಲ್ಟ್' ವಿತರಣೆಗೆ ಸರ್ಕಾರ ನಿರ್ಧಾರ: ಜಾರಿ ಯಾವಾಗ? ಇಲ್ಲಿದೆ ಮಾಹಿತಿ
ಬೆಂಗಳೂರು, ನವೆಂಬರ್ 17: ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಇನ್ನು ಮುಂದಿನ ದಿನಗಳಲ್ಲಿ ಹಾಲಿನ ಜೊತೆಗೆ ರಾಗಿ ಮಾಲ್ಟ್ (Ragi malt) ವಿತರಿಸಲು ತೀರ್ಮಾನಿಸಿದೆ. ಈ ಕುರಿತು ನಡೆಸಿದ ಪ್ರಾಯೋಗಿಕ ಕಾರ್ಯಕ್ರಮ ಯಶಸ್ವಿಯಾಗಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ (ಕ್ಷೀರ ಭಾಗ್ಯ ಯೋಜನೆಯಲ್ಲಿ) ಹೆಚ್ಚುವರಿಯಾಗಿ ದೇಹಕ್ಕೆ ಆರೋಗ್ಯ ನೀಡುವ ರಾಗಿ ಮಾಲ್ಟ್ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು 'ದಿ ಹಿಂದೂ' ವರದಿ ಮಾಡಿದೆ.

ಸರ್ಕಾರ ಕೆಲವು ತಿಂಗಳ ಹಿಂದೆ ರಾಗಿ ಮಾಲ್ಟ್ ವಿತರಣೆಯ ಪ್ರಾಯೋಗಿಕ ಯೋಜನೆಯಾಗಿ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತಂದಿತ್ತು. ಅಲ್ಲಿ ಇದು ಯಶಸ್ವಿಯಾದ ಬೆನ್ನಲ್ಲೆ ಇದೀಗ ರಾಗಿ ಮಾಲ್ಟ್ ವಿತರಣೆ ಯೋಜನೆಯನ್ನು ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೂ ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದೇವೆ.
ಯೋಜನೆ ಕುರಿತು ಸಚಿವರು ಹೇಳಿದ್ದೇನು
ಡಿಸೆಂಬರ್ ನಿಂದ ಈ ಉದ್ದೇಶಿತ ಯೋಜನೆಗೆ ಜಾರಿಗೆ ತರಲಾಗುವುದು ಎಂದು ಗುರುವಾರ ವಿಕಾಸಸೌಧದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಜೊತೆಗೆ ಸಭೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ಗ್ರಾಮೀಣ ಪ್ರದೇಶದಲ್ಲಿ 3 ಸಾವಿರ ಶಾಲೆಗಳನ್ನು ಕರ್ನಾಟಕ ಸಾರ್ವಜನಿಕ ಶಾಲೆಗಳಾಗಿ (ಕೆಪಿಎಸ್) ಮೇಲ್ದರ್ಜೆಗೇರಿಸಲು ನಿರ್ಧರಿಸಿದ್ದೇವೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶಾಲೆ ಅಭಿವೃದ್ಧಿಯಾಗಿವೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಸುಮಾರು 600 ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಗುರಿ ಹೊಂದಿದ್ದೇವೆ ಎಂದರು.
ಕೆಪಿಎಸ್ ಶಾಲೆಗಳ ಮಾದರಿ ಯಶಸ್ವಿ
ಕರ್ನಾಟಕದಲ್ಲಿ ಕೆಪಿಎಸ್ ಶಾಲೆಗಳ ಮಾದರಿ ಪರಿಕಲ್ಪನೆ ಯಶಸ್ವಿ ಆಗಿದೆ. ಈ ಶಾಲೆಗಳು ಜನಪ್ರಿಯವಾಗಿವೆ. ಆ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಆಸಕ್ತಿ ತೋರಿದ್ದಾರೆ. ಈ ಶಾಲೆಗಳು ಶಿಶುವಿಹಾರದಿಂದ 12 ನೇ ತರಗತಿಯವರೆಗೆ ಇಂಗ್ಲಿಷ್-ಮಾಧ್ಯಮ ವಿಭಾಗಗಳೊಂದಿಗೆ ಒಂದೇ ಸಂಯುಕ್ತದಲ್ಲಿ ತರಗತಿಗಳನ್ನು ನೀಡುತ್ತವೆ.
ನಾವು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯ ಮೂಲಕ ಸರಿಯಾದ ಮೂಲ ಸೌಕರ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಸರ್ಕಾರ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಿದೆ.
₹2,500 ಕೋಟಿಯಲ್ಲಿ ಶಾಲಾಭಿವೃದ್ಧಿ
ಕರ್ನಾಟಕದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕಾರ್ಪೊರೇಟ್ ಕಂಪನಿಗಳು ಮತ್ತು ಎನ್‌ಜಿಒಗಳಿಂದ ಸುಮಾರು ₹2,500 ಕೋಟಿ ಸಿಎಸ್‌ಆರ್ ನಿಧಿಯನ್ನು ಸಂಗ್ರಹಿಸಲಿದ್ದೇವೆ. ಈ ನಿಧಿಗಾಗಿ ಸರ್ಕಾರ ಕಾಯುತ್ತಿದ್ದು, ಹಣ ಬಂದ ತಕ್ಷಣ ಕೆಲಸ ಆರಂಭವಾಗಲಿದೆ.
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ನಮ್ಮೊಂದಿಗೆ ಕೆಲಸ ಮಾಡಲು ಆಸಕ್ತಿಯನ್ನು ವ್ಯಕ್ತಪಡಿಸಿದ ಖಾಸಗಿ ವಲಯದ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸಂಸ್ಥೆ ಕೋವಿಡ್ ಕಾಲಕ್ಕೂ ಮೊದ್ದಲಿನ SSLC ಮತ್ತು PUC-2ನೇ ತರಗತಿಯ ಫಲಿತಾಂಶಕ್ಕಿಂತಲೂ ಈಗ ಅದನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ತಿಳಿಸಿದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications