ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರದ ಚಿಂತನೆ

|
Google Oneindia Kannada News

ಬೆಂಗಳೂರು, ಜುಲೈ 6: ಕೋವಿಡ್19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ಡಿ' ಗ್ರೂಪ್ ನೌಕರರಿಗೆ ವೇತನ ದುಪ್ಪಟ್ಟು ಮಾಡುವುದು ಸೇರಿದಂತೆ ಎಲ್ಲಾ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು 2-3 ದಿನಗಳಲ್ಲಿ ಸ್ಪಷ್ಟವಾಗಲಿದೆ ಎಂದು ಹೇಳಿದರು.

60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರಿಗೆ ಹೋಂ ಐಸೋಲೇಷನ್60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರಿಗೆ ಹೋಂ ಐಸೋಲೇಷನ್

ಆರೋಗ್ಯ ಯೋಧರಾಗಿ ಕೆಲಸ ಮಾಡುತ್ತಿರುವ ಎಲ್ಲರೂ ಸುಮಾರು 120 ದಿನಗಳಿಂದ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಹೋಗಿದ್ದಾರೆ. ಅವರುಗಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿದ್ದು ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಹೆಚ್ಚುವರಿ ಭತ್ಯೆ ಅಲ್ಪಮಟ್ಟಿನ ಪರಿಹಾರವಾಗಲಿದೆ ಎಂದು ಅವರು ತಿಳಿಸಿದರು.

Karnataka Government is considering to provide risk allowance to health workers

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಿಸಲು ಸರ್ಕಾರ ಮತ್ತಷ್ಟು ಬಿಗಿಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರತಿದಿನ ಕೋವಿಡ್ ಟೆಸ್ಟಿಂಗ್ ಹೆಚ್ಚಿಸುವ ಗುರಿಹೊಂದಲಾಗಿದ್ದು ಕಳೆದ 24 ಗಂಟೆಗಳಲ್ಲಿ 15 ಸಾವಿರಕ್ಕೂ ಅಧಿಕ ಪರೀಕ್ಷೆ ನಡೆಸಲಾಗಿದೆ, ಟೆಸ್ಟಿಂಗ್ ನಿರ್ವಹಣೆಗೆ ಹಿರಿಯ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪೊಲೀಸರಿಗೆ ವೇತನ ಏರಿಕೆ, ಪೇದೆಗೆ ಎಷ್ಟು, ಇನ್ಸ್ ಪೆಕ್ಟರ್ಸ್ ಗೆ ಎಷ್ಟು ಏರಿಕೆ?ಪೊಲೀಸರಿಗೆ ವೇತನ ಏರಿಕೆ, ಪೇದೆಗೆ ಎಷ್ಟು, ಇನ್ಸ್ ಪೆಕ್ಟರ್ಸ್ ಗೆ ಎಷ್ಟು ಏರಿಕೆ?

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೋವಿಡ್-19 ಅನ್ನು ನಿಗ್ರಹಿಸುವುದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಂತರ ಪತ್ರಿಕಾ ಗೋಷ್ಠಿ ನಡೆಸಿದರು.

English summary
Karnataka Government is considering to provide risk allowance to health workers who are working in the front line in this fight against covid19, said Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X