ಇನ್ಮುಂದೆ ಅಪಘಾತಗಳಾದರೆ ಟೆನ್ಷನ್‌ ಬೇಡ; ಯಾಕೆ?

ಬೆಂಗಳೂರು, ಆಗಸ್ಟ್‌ 27; ಪ್ರತಿದಿನವೂ ರಸ್ತೆ ಅಪಘಾತ ಪ್ರಕರಣಗಳ ಬಗ್ಗೆ ಕೇಳುತ್ತಿರುತ್ತೇವೆ. ಅಚಾನಕ್‌ ಆಗಿ ನಡೆಯುವ ಈ ಘಟನೆಗಳಲ್ಲಿ ಪ್ರಾಣ ಕೂಡ ಕಳೆದುಕೊಳ್ಳುತ್ತಾರೆ. ಸಕಾಲಕ್ಕೆ ಆಂಬುಲೆನ್ಸ್‌ ಬಾರದೆ ಇರುವುದು, ಹತ್ತಿರದಲ್ಲಿ ಆಸ್ಪತ್ರೆ ಸಿಗದಿರುವುದು ಸೇರಿ ನಾನಾ ಕಾರಣಗಳಿಂದ ಅಪಘಾತ ಪ್ರಕರಣಗಳಲ್ಲಿ ಜೀವ ಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿರುವ ರಾಜ್ಯ ಸರ್ಕಾರವು ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್‌ಗಳನ್ನು ತೆರೆಯಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದು ಘೋಷಿಸಿದರು.

Karnataka Government Is Planning To Open Trauma Centers Near Accident Zones

ಇಂದು ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಪಘಾತಗಳಾದಾಗ ಗಾಯಾಳುಗಳ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿಗೆ ಸಮೀಪವೇ ಟ್ರಾಮಾ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಇದರಿಂದ ಸಕಾಲಕ್ಕೆ ಗಾಯಾಳುಗಳಿಗೆ ಚಿಕಿತ್ಸೆ ನೀಡಬಹುದಾಗಿದೆ. ಈ ತುರ್ತು ಚಿಕಿತ್ಸೆ ಸಿಗುವುದರಿಂದ ಗಾಯಾಳುಗಳ ಪ್ರಾಣ ಉಳಿಸಲೂ ವರದಾನವಾಗಲಿದೆ ಎಂದು ಹೇಳಲಾಗುತ್ತಿದೆ.

ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ. ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಮ್ಮಿ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ʼನಾನೂ ಸೇರಿ ಮಂತ್ರಿಗಳು, ರಾಜಕಾರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಕರ್ತವ್ಯನಿಷ್ಠರಾಗಿ ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Karnataka Government Is Planning To Open Trauma Centers Near Accident Zones

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಜೊತೆಗೆ ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚಿಸಿದರು.

ಇನ್ನು ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಕರೆ ಮಾಡುವ ಮೂಲಕ ಇನ್ನುಮುಂದೆ ದಿನದ 24 ಗಂಟೆಯೂ ಜಯದೇವ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಇದಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಜೊತೆಗೆ ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+