ಕರ್ನಾಟಕ: ಸರ್ಕಾರ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದಲ್ಲಿ ಹೆಚ್ಚು ಮೊಟ್ಟೆ ನೀಡಲು ಉತ್ಸುಕ: ಬಿಸಿ ನಾಗೇಶ್

ಕರ್ನಾಟಕ ಸರ್ಕಾರವು ಮಧ್ಯಾಹ್ನ ಬಿಸಿಊಟದ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚು ದಿನ ಮೊಟ್ಟೆ ನೀಡಲು ಉತ್ಸುಕವಾಗಿದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ತಿಳಿಸಿದರು.

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಸರ್ಕಾರವು ಮಧ್ಯಾಹ್ನ ಬಿಸಿಊಟದ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚು ದಿನ ಮೊಟ್ಟೆ ನೀಡಲು ಉತ್ಸುಕವಾಗಿದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ತಿಳಿಸಿದರು.

ರಾಜ್ಯದಲ್ಲಿ ಪ್ರಾಥಮಿಕ-ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಬರುವ 8 ನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ 46 ದಿನಗಳ ಕಾಲ ಮೊಟ್ಟೆ ನೀಡಲಾಗುತ್ತಿದೆ. ಆದಷ್ಟು ಶೀಘ್ರವೇ ಈ ಹಾಲಿ 45 ದಿನಗಳಿಗಿಂತಲೂ ಹೆಚ್ಚು ದಿನ ಮೊಟ್ಟೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಸೋಮವಾರ ವಿಧಾನ ಪರಿಷತ್ತಿನ ಸದಸ್ಯರಿಗೆ ತಿಳಿಸಿದರು.

ಸದನದಲ್ಲಿ ಜೆಡಿಎಸ್ ಶಾಸಕ ಕೆ.ಎ.ತಿಪ್ಪೇಸ್ವಾಮಿ. ಆರು ಮತ್ತು 15 ವರ್ಷದೊಳಗಿನ ಮಕ್ಕಳಿಗೆ ಅಥವಾ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆಗಳನ್ನು ನೀಡುತ್ತಿರುವ ಬಗ್ಗೆ ಪ್ರಸ್ತಾಪಿಸಿದರು.

Karnataka government is thinking of giving more eggs in midday meal for students: bc Nagesh

ಇದೇ ವಿಷಯವಾಗಿ ಸದನದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ಸಿಗುತ್ತಿಲ್ಲ ಎಂದು ಆರೋಪಿಸಿದರು. ಮಕ್ಕಳಿಗೆ ನೀಡುವ ಆಹಾರವನ್ನು ರಾಜಕೀಯಗೊಳಿಸಲಾಗುತ್ತಿದೆ. ಯಾರಾದರೂ ಮಾಂಸಾಹಾರಿ ತಿಂದರೆ ಅದನ್ನು ಅಶುದ್ಧ ಎಂದು ಬಿಂಬಿಸಲಾಗುತ್ತಿದೆ. ಮೊಟ್ಟೆ ಸೇರಿದಂತೆ ಮಾಂಸಾಹಾರಿ ಆಹಾರವನ್ನು ಸೇವಿಸುವುದರ ಮೇಲೆ ಧಾರ್ಮಿಕ ನಿರ್ಬಂಧಗಳು ಇವೆ. ಇದು ವಿದ್ಯಾರ್ಥಿಗಳ ಪೌಷ್ಠಿಕಾಂಶದ ಪ್ರಮಾಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದರು.

ಮಕ್ಕಳಿಗೆ ಆಹಾರ ಆಯ್ಕೆ ಸ್ವಾತಂತ್ರ್ಯ

ಈ ಆರೋಪಗಳಿಗೆ ಪ್ರತಿಕ್ರಿಯಿಸಿ ಶಿಕ್ಷಣ ಸಚಿವರು, ರಾಜ್ಯದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಸಿಗುತ್ತಿಲ್ಲ ಎಂಬ ಆರೋಪ ಆಧಾರರಹಿತವಾಗದದ್ದು, ಅದು ಸುಳ್ಳು ಮಾಹಿತಿ ಎಂದರು. ಆರೋಪ ತಳ್ಳಿ ಹಾಕಿದರು.

ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಿರುವ ಪ್ರದೇಶಗಳ ಶಾಲೆಗಳಲ್ಲಿ ಆರಂಭದಲ್ಲಿ ಮೊಟ್ಟೆಗಳನ್ನು ಒದಗಿಸಿದ ನಂತರ, ಮೊಟ್ಟೆ ಸೇವನೆಯ ಪ್ರಯೋಜನಗಳನ್ನು ಸರ್ಕಾರ ಅಧ್ಯಯನ ಮಾಡಿದೆ. ಮಕ್ಕಳಲ್ಲಿ ಪೌಷ್ಠಿಕಾಂಶದ ಮಟ್ಟ ಹೆಚ್ಚಾಗಿದೆ. ರಾಜ್ಯ ಸರ್ಕಾರ ಮೊಟ್ಟೆ ವಿತರಣೆ ನಿರ್ಧಾರದಲ್ಲಿ ಸ್ಪಷ್ಟವಾಗಿದೆ ಎಂದು ತಿಳಿಸಿದರು.

Karnataka government is thinking of giving more eggs in midday meal for students: bc Nagesh

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, ರಾಜ್ಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಬಾಳೆಹಣ್ಣು ಹಾಗೂ ಚಿಕ್ಕಿಗಿಂತ ಮೊಟ್ಟೆಗೆ ಆದ್ಯತೆ ನೀಡುತ್ತಿದ್ದಾರೆ. ಮಕ್ಕಳಿಗೆ ತಮ್ಮ ಇಷ್ಟದ ಆಹಾರ ಪದಾರ್ಥಗಳನ್ನು ಆಯ್ಕೆ ಮಾಡಿಕೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ನಾಗೇಶ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+