ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ; 500 ಕೋಟಿ ರೂ ಮೀಸಲು
ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಈ ನಿಗಮವನ್ನು ಸ್ಥಾಪಿಸಿರುವುದಾಗಿ ಸರ್ಕಾರದ ಅಧೀಕೃತ ಪ್ರಕಟಣೆಯಲ್ಲಿ ತಿಳಿಸಿದ್ದು, ನಿಗಮದ ಕಾರ್ಯಗಳಿಗಾಗಿ ಒಟ್ಟು ಐನೂರು ಕೋಟಿ ರೂಪಾಯಿ ಮೀಸಲಿಡುವುದಾಗಿ ತಿಳಿಸಿದೆ.
ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಮುಗಿಸಿ ಶನಿವಾರ ರಾಜ್ಯಕ್ಕೆ ಮರಳಿರುವ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಈ ಹಿಂದೆಯೇ ಹಲವು ಬಾರಿ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ಈ ಸಂಬಂಧ ಆದೇಶ ಹೊರಡಿಸಲಾಗಿದೆ.

ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ಗೌಡ (Gowda), ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಜಾತಿಗಳಿಗೆ ಪ್ರವರ್ಗ 3 ಎನಲ್ಲಿ 1 (a) ಇಂದ (t)ವರೆಗೆ ಮೀಸಲಾತಿ ಕಲ್ಪಿಸಲಾಗಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ "ಒಕ್ಕಲಿಗ ಅಭಿವೃದ್ಧಿ ನಿಗಮ" ಸ್ಥಾಪಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ನಿಗಮವನ್ನು ಕಂಪನಿ ಕಾಯ್ದೆ 2013ರ ಅಡಿಯಲ್ಲಿ ನೋಂದಾಯಿಸಿ ಸ್ಥಾಪಿಸಲಾಗಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಸಂಬಂಧ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ.












Click it and Unblock the Notifications