Karnataka Government: ಅನುಕಂಪದ ಆಧಾರದ ನೇಮಕಾತಿ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 19: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನುಕಂಪ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಕೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ 4(4) ರನ್ವಯ ಅಭ್ಯರ್ಥಿಯ ವಿದ್ಯಾರ್ಹತೆಗನುಗುಣವಾಗಿ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಯ ವೇತನ ಶ್ರೇಣಿಯನ್ನು ಮೀರದಂತಹ ಗರಿಷ್ಠ ಗ್ರೂಪ್ "ಸಿ" ಹುದ್ದೆ ಅಥವಾ ಗ್ರೂಪ್ "ಡಿ" ಹುದ್ದೆಯನ್ನು ನೀಡಬಹುದಾಗಿದೆ. ಅನುಕಂಪದ ಆಧಾರದ ಮೇಲಿನ ನೇಮಕಾತಿ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ನಿರ್ಧರಿಸಬೇಕಿರುತ್ತದೆ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ.
ಆದರೆ, ಕೆಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಅವರುಗಳ ವಿದ್ಯಾರ್ಹತೆಯನ್ನು ಪರಿಗಣಿಸದೇ ಕೆಳಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುತ್ತವೆ. ಈ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುತ್ತದೆ.
ಅನುಕಂಪದ ಆಧಾರದ ಮೇಲಿನ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಇತರೆ ಜಾತಿ/ಧರ್ಮ/ವರ್ಗದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಯಾವುದೇ ತಾರತಮ್ಮ ಮಾಡದಂತೆ ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಹಾಗೂ ಈ ರೀತಿ ನಿಯಮಾನುಸಾರ ಕ್ರಮವಹಿಸದ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಎಲ್ಲಾ ಸಕ್ಷಮ / ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಿದೆ.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications