Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸಂಬಳ ಪ್ಯಾಕೇಜ್ ಕುರಿತು ಕರ್ನಾಟಕ ಸರ್ಕಾರ ಮಹತ್ವ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್ ಖಾತೆಯಲ್ಲಿ ಕಡ್ಡಾಯ ನೋಂದಣಿ ಕುರಿತು ಮಹತ್ವದ ಆದೇಶ ಹೊರಡಿಸಿದ್ದು, ಇದು ಸಾಮಾಜಿಕ ಭದ್ರತೆಗಾಗಿ ವಿಮಾ ಸೌಲಭ್ಯಗಳನ್ನು ಒದಗಿಸುತ್ತದೆ. ಸ್ಯಾಲರಿ ಪ್ಯಾಕೇಜ್ ಮಾಡಿ ಕೊಳ್ಳದ ನೌಕರರ ಜನವರಿ ವೇತನ ಬಿಲ್ ಆಗುವುದಿಲ್ಲ. ಹೀಗಾಗಿ ಸಂಬಳ ಪ್ಯಾಕೇಜ್ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಆದೇಶವನ್ನ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ನೋಂದಣಿಗೆ ನಿಗದಿಪಡಿಸಲಾಗಿದ್ದ ಅಂತಿಮ ಗಡುವನ್ನು ವಿಸ್ತರಿಸಿ ಅಧಿಕೃತ ಆದೇಶವನ್ನ ರಾಜ್ಯ ಸರ್ಕಾರ ಹೊರಡಿಸಲಾಗಿದೆ. ಇದರಿಂದಾಗಿ ತಾಂತ್ರಿಕ ಕಾರಣಗಳಿಂದ ಅಥವಾ ಇತರ ಸಮಸ್ಯೆಗಳಿಂದ ಈವರೆಗೆ ನೋಂದಣಿ ಮಾಡಿಕೊಳ್ಳದ ಸಾವಿರಾರು ನೌಕರರಿಗೆ ದೊಡ್ಡ ಮಟ್ಟದ ಸಮಾಧಾನ ಸಿಕ್ಕಂತಾಗಿದೆ.

ಈ ಕುರಿತು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರತಿಯ ಪ್ರಕಾರ, ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ '' 'ಬಿ' ಮತ್ತು 'ಸಿ' ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಹೊರಡಿಸಲಾಗಿದ್ದ ಆದೇಶದ ಪ್ರಕಾರ, ರಾಜ್ಯ ಸರ್ಕಾರದ ಅಧೀನದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ Group A, B ಮತ್ತು C ವೃಂದದ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ನಿಗದಿತ ವೇತನ ಪ್ಯಾಕೇಜ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 15.12.2025 ರವರೆಗೆ ಸಮಯ ನೀಡಲಾಗಿತ್ತು. ಒಂದು ವೇಳೆ ಈ ಅವಧಿಯೊಳಗೆ ನೋಂದಣಿ ಮಾಡಿಕೊಳ್ಳದಿದ್ದರೆ, ಅಂತಹ ಅಧಿಕಾರಿಗಳ ಸಂಬಳ ವಿತರಣೆಯನ್ನು ತಡೆಹಿಡಿಯಲಾಗುವುದು ಎಂದು ಎಚ್ಚರಿಸಲಾಗಿತ್ತು.
ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, 'ಎ' ಮತ್ತು "ಬಿ" ಗುಂಪಿನ ಅಧಿಕಾರಿಗಳಿಗೆ ಹಾಗೂ 'ಸಿ' ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಈ ನಿಯಮವು ಇಲಾಖೆಯ ಎಲ್ಲಾ 'A', 'B' ಮತ್ತು 'C' ಗುಂಪಿನ ಅರ್ಹ ಅಧಿಕಾರಿ ಹಾಗೂ ನೌಕರರಿಗೆ ಅನ್ವಯಿಸುತ್ತದೆ.
ನೌಕರರು ತಮ್ಮ ವಿವರಗಳನ್ನು ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಲು 16.01.2026 ರವರೆಗೆ ಕಾಲಾವಕಾಶ ನೀಡಲಾಗಿದೆ. ವಿಸ್ತರಿಸಲಾದ ಈ ಹೊಸ ಅವಧಿಯ ಒಳಗಾಗಿಯೂ ನೋಂದಣಿ ಮಾಡಿಕೊಳ್ಳದಿದ್ದರೆ, ಅಂತಹ ನೌಕರರ ಮಾಸಿಕ ವೇತನ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎಂದು ಸರ್ಕಾರ ತಿಳಿಸಿದೆ. ಈ ಪ್ಯಾಕೇಜ್ ನೋಂದಣಿಯಿಂದಾಗಿ ಸರ್ಕಾರದ ಆರ್ಥಿಕ ವ್ಯವಹಾರಗಳಲ್ಲಿ ಪಾರದರ್ಶಕತೆ ಬರಲಿದ್ದು, ನೌಕರರ ವೇತನ ವಿತರಣಾ ಪ್ರಕ್ರಿಯೆ ಮತ್ತಷ್ಟು ಸರಳಗೊಳ್ಳಲಿದೆ. ಹೀಗಾಗಿ ಬಾಕಿ ಉಳಿದಿರುವ ಎಲ್ಲಾ ನೌಕರರು ಕೂಡಲೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications