• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಜೂನ್ 09 : ಕರ್ನಾಟಕಕ್ಕೆ ಆಗಮಿಸುವ ಹೊರ ರಾಜ್ಯದ ಪ್ರಯಾಣಿಕರಿಗಾಗಿ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ ಈ ಮಾರ್ಗಸೂಚಿ ಮಹಾರಾಷ್ಟ್ರ ರಾಜ್ಯದಿಂದ ಬರುವವರಿಗೆ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

   Amit Shah : Government may have made a mistake while dealing with Corona.! | Narendra Modi | BJP

   ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ಸೋಮವಾರ ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ. ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನದ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಿಯಮ ತೆಗೆದುಹಾಕಲಾಗಿದೆ.

   ಕರ್ನಾಟಕಕ್ಕೆ ಬರುವ ರೈಲ್ವೆ ಪ್ರಯಾಣಿಕರೇ ಗಮನಿಸಿಕರ್ನಾಟಕಕ್ಕೆ ಬರುವ ರೈಲ್ವೆ ಪ್ರಯಾಣಿಕರೇ ಗಮನಿಸಿ

   ಹೊರ ರಾಜ್ಯದಿಂದ ಆಗಮಿಸುವವರಿಗೆ ರಾಜ್ಯದ ಚೆಕ್ ಪೋಸ್ಟ್‌ನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ. ಜ್ವರದ ಯಾವುದೇ ಲಕ್ಷಣಗಳು ಇಲ್ಲವಾದಲ್ಲಿ ಕೈಗೆ ಹೋಂ ಕ್ವಾರಂಟೈನ್ ಸೀಲ್‌ ಹಾಕಿ ಮನೆಗೆ ಕಳಿಸಲಾಗುತ್ತದೆ. ಲಕ್ಷಣಗಳು ಇದ್ದರೆ ಕೋವಿಡ್ - 19 ಪರೀಕ್ಷೆಗಾಗಿ ಆಸ್ಪತ್ರೆಗೆ ಹೋಗಬೇಕು.

    ಉಡುಪಿ ಕ್ವಾರಂಟೈನ್ ಕೇಂದ್ರದಲ್ಲೇ ಬರ್ತ್ ಡೇ ಪಾರ್ಟಿ! ಉಡುಪಿ ಕ್ವಾರಂಟೈನ್ ಕೇಂದ್ರದಲ್ಲೇ ಬರ್ತ್ ಡೇ ಪಾರ್ಟಿ!

   ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ಜನರಿಗೆ ಈ ನಿಯಮ ಅನ್ವಯ ಆಗುವುದಿಲ್ಲ. ಅವರು ಕಡ್ಡಾಯವಾಗಿ 7 ದಿನದ ಸಾಂಸ್ಥಿಕ ಕ್ವಾರಂಟೈನ್ ಮತ್ತು 14 ದಿನದ ಹೋಂ ಕ್ವಾರಂಟೈನ್‌ನಲ್ಲಿರಬೇಕು ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.

   ವಲಸೆ ಕಾರ್ಮಿಕರಿಗೆ ಮಹತ್ವದ ಸೂಚನೆ ಕೊಟ್ಟ ಬಿಬಿಎಂಪಿ ವಲಸೆ ಕಾರ್ಮಿಕರಿಗೆ ಮಹತ್ವದ ಸೂಚನೆ ಕೊಟ್ಟ ಬಿಬಿಎಂಪಿ

   ಸೇವಾ ಸಿಂಧುವಿನಲ್ಲಿ ನೋಂದಣಿ ಕಡ್ಡಾಯ

   ಸೇವಾ ಸಿಂಧುವಿನಲ್ಲಿ ನೋಂದಣಿ ಕಡ್ಡಾಯ

   ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಮೊದಲು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಹೆಸರು, ವಿಳಾಸ, ಮೊಬೈಲ್ ನಂಬರ್ ಕೊಟ್ಟು ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಯಾವುದೇ ಅನುಮತಿಗಾಗಿ ಕಾಯುವ ಅಗತ್ಯವಿಲ್ಲ.

   ಬ್ಯುಸಿನೆಸ್ ಟ್ರಿಪ್‌ಗೆ ಬರುವವರು ಹೆಸರು, ವಿಳಾಸ, ಕರ್ನಾಟಕದಲ್ಲಿ ಭೇಟಿಯಾಗಲು ಬಯಸುವ ವ್ಯಕ್ತಿಯ ಹೆಸರು, ವಿಳಾಸ ನೀಡಬೇಕು. ವಾಪಸ್ ಹೋಗುವ ದಿನಾಂಕವನ್ನು ನಮೂದು ಮಾಡಬೇಕು.

   ಹೋಂ ಕ್ವಾರಂಟೈನ್ ಸೀಲ್

   ಹೋಂ ಕ್ವಾರಂಟೈನ್ ಸೀಲ್

   ಹೊರ ರಾಜ್ಯದಿಂದ ಬರುವಾಗ ಚೆಕ್ ಪೋಸ್ಟ್, ವಿಮಾನ ನಿಲ್ದಾಣ, ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಪರೀಕ್ಷೆ ಬಳಿಕ ಕೈಗೆ ಹೋಂ ಕ್ವಾರಂಟೈನ್‌ ಸೀಲ್ ಹಾಕಲಾಗುತ್ತದೆ.

   ಪರೀಕ್ಷೆ ವೇಳೆ ಕೋವಿಡ್ - 19 ಸೋಂಕಿನ ಲಕ್ಷಣ ಕಂಡು ಬಂದರೆ ತಕ್ಷಣ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ. ಯಾವುದೇ ಲಕ್ಷಣ ಇಲ್ಲದಿದ್ದರೆ ಅವರನ್ನು ಮನೆಗೆ ಕಳಿಸಲಾಗುತ್ತದೆ. 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರುವುದು ಕಡ್ಡಾಯವಾಗಿದೆ.

   ಬೇರೆ ರಾಜ್ಯದಿಂದ ಬರುವವರು

   ಬೇರೆ ರಾಜ್ಯದಿಂದ ಬರುವವರು

   14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರುವುದು ಕಡ್ಡಾಯ. ಈ ಅವಧಿಯಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೋಂ ಕ್ವಾರಂಟೈನ್ ವ್ಯವಸ್ಥೆ ಇಲ್ಲದಿದ್ದರೆ ಅವರಿಗೆ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಯನ್ನು ಮಾಡಲಾಗುತ್ತದೆ.

   ಬ್ಯುಸಿನೆಸ್ ಟ್ರಿಪ್ ಮೇಲೆ 4 ದಿನದ ಅವಧಿಗೆ ಬರುವವರಿಗೆ ಯಾವುದೇ ಕ್ವಾರಂಟೈನ್ ಇರುವುದಿಲ್ಲ. 4 ದಿನಕ್ಕಿಂತ ಹೆಚ್ಚಿನ ಅವಧಿಗೆ ಇರಲು ಆಗಮಿಸುವವರು ಕ್ವಾರಂಟೈನ್ ನಿಯಮಗಳನ್ನು ಪಾಲನೆ ಮಾಡಬೇಕು.

   ಮಹಾರಾಷ್ಟ್ರದಿಂದ ಬರುವವರು

   ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರದಿಂದ ಬರುವವರಿಗೆ ಈ ನಿಯಮ ಅನ್ವಯ ಆಗುವುದಿಲ್ಲ.

   English summary
   Karnataka government issued new SOP for the inter state passengers. Passengers must go for 14 days of home quarantine. No need of 7 days of institutional quarantine. This will not apply for the passengers who come from Maharashtra.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X