Government Jobs: ಸರ್ಕಾರಿ ಉದ್ಯೋಗ ಈ ಕಾರಣಕ್ಕೆ ಅರ್ಹರಿಗೆ ಸಿಗಲ್ಲ: ಸಿ.ಟಿ.ರವಿ ಹೀಗಂದಿದ್ದೇಕೆ?

ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಯುವಜನರ ದೊಡ್ಡ ಕನಸು. ಆದರೆ ಅದು ಅಷ್ಟು ಸುಲಭದ ಮಾತಲ್ಲ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇರುವುದು ಗೊತ್ತೇ ಇದೆ. ಸರ್ಕಾರದ 43 ಇಲಾಖೆಗಳಲ್ಲಿ ಖಾಲಿ ಇರುವ 2.86 ಲಕ್ಷ ಹುದ್ದೆಗಳಿಗೆ ನೇಮಕಾತಿ ಆಗುತ್ತಿಲ್ಲ ಎಂದು ಆಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟನೆಯೂ ನಡೆಸಿದ್ದಾರೆ. ಆದರೆ ಆ ಒಂದು ಕಾರಣಕ್ಕೆ ಅರ್ಹ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ರಾಜಕಾರಣಿಯೊಬ್ಬರು ಹೇಳಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.86 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ಸಾವಿರಾರು ಯುವಕರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಭವಿಷ್ಯವಾದ ಯುವ ಜನತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ ಇದು ಯಾವುದರ ಚಿಂತೆಯೂ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಲಾಬಿಯಲ್ಲಿ ನಿರತರಾಗಿದ್ದಾರೆ ಬಿಜೆಪಿ ಪಕ್ಷದ ವಿಧಾನದ ಪರಿಷತ್‌ ಸದಸ್ಯ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ.

Karnataka Government Jobs Delay CT Ravi Says Eligible Candidates Losing Opportunities

ವಿಳಂಬವಾದರೆ ಸರ್ಕಾರಿ ಉದ್ಯೋಗ ಸಿಗಲ್ಲ

ಇದೇ ರೀತಿ ನೇಮಕಾತಿಯಲ್ಲಿ ವರ್ಷಗಟ್ಟಲೆ ವಿಳಂಬವಾದರೆ, ಸಾವಿರಾರು ಅರ್ಹ ಅಭ್ಯರ್ಥಿಗಳು ವಯೋಮಿತಿಯ ಕಾರಣದಿಂದ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ಇದು ಕೇವಲ ನಿರ್ಲಕ್ಷ್ಯ ಮಾತ್ರವಲ್ಲ, ಕರ್ನಾಟಕದ ಯುವಕರಿಗೆ ಸರ್ಕಾರ ಬಗೆಯುತ್ತಿರುವ ದ್ರೋಹ. ಇಷ್ಟಾದರೂ ಕಾಂಗ್ರೆಸ್‌ ಸರ್ಕಾರ ಈ ಜ್ವಲಂತ ಸಮಸ್ಯೆಯನ್ನು ಹಾಗೆಯೇ ಕಡೆಗಣಿಸುತ್ತಿದೆ ಎಂದು ಸಿಟಿ ರವಿ ಕಳವಳ ವ್ಯಕ್ತಪಡಿಸಿದ್ದಾರೆ.

2 ವರ್ಷದಿಂದ ನೇಮಕಾತಿ ಆಗಿಲ್ಲ. ಯುವಕರಿಗೆ ಉದ್ಯೋಗವಿಲ್ಲ. ಕೊಟ್ಟ ಭರವಸೆ ಈಡೇರಿಸಿಲ್ಲ. 2.5 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿಯಿದ್ದರೂ ಭರ್ತಿ ಮಾಡಿಲ್ಲ ಎಂದು ಬಿಜೆಪಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ನಿರುದ್ಯೋಗ ನಿಯಂತ್ರಣಕ್ಕೆ ಕ್ರಮವಿಲ್ಲ. ಎರಡು ವರ್ಷಗಳಲ್ಲಿ ಯುವಕರ ಕೈಗೆ ಚಿಪ್ಪು ಕೊಟ್ಟಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಸಿದ್ದರಾಮಯ್ಯ ನವರೇ, ಯುವಕರ ನೋವಿನ ಸಮಸ್ಯೆ ಆಲಿಸಿ, ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಿ, ಉದ್ಯೋಗಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಎಂದು ಬಿಜೆಪಿ ಆಗ್ರಹಿಸಿತ್ತು.

ಇತ್ತೀಚೆಗೆ ಸರ್ಕಾರಿ ನೇಮಕಾತಿ ಪ್ರಾರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡ ಹಾಗೂ ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ಕೂಡ ನಡೆಸಿದರು. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಈ ಹೋರಾಟ ಇನ್ನು ತೀವ್ರವಾಗುತ್ತದೆ ಎಂದು ಎಚ್ಚರಿಕೆಯೂ ನೀಡಿದ್ದರು. ಶಾಕಸ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಈ ಬಗ್ಗೆ ಧ್ವನಿಗೂಡಿಸಿದ್ದರು. ರೋಸ್ಟರ್ ಬಿಂದುವನ್ನು ನೇಮಕಾತಿಯಲ್ಲಿ ಅಳವಡಿಸಬೇಕೆಂದು 3A, 3B ವರ್ಗದ ಅಭ್ಯರ್ಥಿಗಳು ವಿಜಯಪುರದಲ್ಲಿ ನಡೆಸಿದ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಅತಾರ್ಕಿಕ ನೀತಿಗಳಿಂದ ಈ ವರ್ಗದ ಅಭ್ಯರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಎಚೆತ್ತು, ಇವರಿಗೆ ನ್ಯಾಯ ದೊರಕಿಸಿಕೊಡಬೇಕು. ಬಾಕಿ ಇರುವ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಬೇಕು. ಈ ನೇಮಕಾತಿಯನ್ನು ಭ್ರಷ್ಟ ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+