ಸರ್ಕಾರಿ ಶಾಲೆಗಳತ್ತ ಸರ್ಕಾರದ ಚಿತ್ತ; 100 ದಿನಗಳಲ್ಲಿ 100 ಶಾಲೆಗಳಿಗೆ ಆಧುನಿಕ ಸ್ಪರ್ಶ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳನ್ನು ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ '100 Days, 100 Schools' ಎಂಬ ವಿಶೇಷ ಅಭಿಯಾನ ಆರಂಭಿಸಲು ಮುಂದಾಗಿದೆ.

ಈ ಯೋಜನೆಯಡಿ ಖಾಸಗಿ ಕಂಪನಿಗಳು, ಕಾರ್ಪೊರೇಟ್ ಸಂಸ್ಥೆಗಳು, ಟ್ರಸ್ಟ್‌ಗಳು ಹಾಗೂ ದತ್ತಿ ಸಂಸ್ಥೆಗಳ ಸಹಭಾಗಿತ್ವದೊಂದಿಗೆ 100 ಸರ್ಕಾರಿ ಶಾಲೆಗಳನ್ನು 100 ದಿನಗಳ ಅವಧಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

Karnataka government Karnataka govt to launch campaign to transform 100 schools in 100 days

ಕಾಂಗ್ರೆಸ್ ಸದಸ್ಯ ವಿನಯ್ ಕಾರ್ತಿಕ್ ಪ್ರಕಾಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, CSR ಯೋಜನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂಸ್ಥೆಗಳಿಗೆ ಶಾಲೆಗಳನ್ನು ಅಭಿವೃದ್ಧಿಪಡಿಸಲು 100 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಹೇಳಿದರು.

ಆಸಕ್ತ ಕಾರ್ಪೊರೇಟ್ ಸಂಸ್ಥೆಗಳು, ಎನ್‌ಜಿಒಗಳು ಹಾಗೂ ಟ್ರಸ್ಟ್‌ಗಳೊಂದಿಗೆ ಪ್ರತ್ಯೇಕ ಒಡಂಬಡಿಕೆ (MoU) ಮಾಡಿಕೊಳ್ಳಲಾಗುವುದು. ಈ ಸಂಸ್ಥೆಗಳು ಶಾಲೆಗಳ ಅಭಿವೃದ್ಧಿಗೆ ಕನಿಷ್ಠ ಮೂರು ವರ್ಷ ಹಾಗೂ ಗರಿಷ್ಠ ಐದು ವರ್ಷಗಳ ಕಾಲ ಬೆಂಬಲ ನೀಡುವಂತೆ ಒಪ್ಪಂದದಲ್ಲಿ ಷರತ್ತು ವಿಧಿಸಲಾಗುವುದು ಎಂದು ಸಚಿವರು ವಿವರಿಸಿದರು.

ಗ್ರಾಮೀಣ ಶಾಲೆಗಳಿಗೆ ಆದ್ಯತೆ

CSR ಅನುದಾನದ ಮೂಲಕ ಶಾಲೆಗಳ ಅಭಿವೃದ್ಧಿ ಕೈಗೊಳ್ಳುವಾಗ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಅಭಿವೃದ್ಧಿಪಡಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ನಿಯಮಿತ ಸಭೆ ನಡೆಸುವಂತೆ ಹಾಗೂ ಸಮನ್ವಯಕ್ಕಾಗಿ ಪ್ರತ್ಯೇಕ ಇ-ಮೇಲ್ ಮತ್ತು ದೂರವಾಣಿ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಪ್ರಗತಿಯನ್ನು 'ನನ್ನ ಶಾಲೆ ನನ್ನ ಕೊಡುಗೆ' ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

1,672 ಶಾಲೆಗಳು ಆಯ್ಕೆ

ರಾಜ್ಯದಲ್ಲಿ ಈಗಾಗಲೇ 1,672 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ. '100 ದಿನ, 100 ಶಾಲೆ' ಅಭಿಯಾನದ ಪ್ರಗತಿಯನ್ನು ಮುಖ್ಯಮಂತ್ರಿ ನೇತೃತ್ವದ ಮೇಲ್ವಿಚಾರಣಾ ಸಮಿತಿ ಗಮನಿಸಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಅಭಿಯಾನದ ಮೂಲಕ ಸರ್ಕಾರಿ ಶಾಲೆಗಳಿಗೆ ಖಾಸಗಿ ವಲಯದ CSR ನೆರವು ಪಡೆದು ಮೂಲಸೌಕರ್ಯ, ಕಲಿಕಾ ವಾತಾವರಣ ಹಾಗೂ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+