5,000 ಕೋಟಿ ಗೃಹಲಕ್ಷ್ಮೀ ನಂತರ ಅನ್ನಭಾಗ್ಯ ಮೀಸಲಿಟ್ಟಿದ್ದ 657 ಕೋಟಿ ಹಣವೂ ಗುಳುಂ: ಆರ್ ಅಶೋಕ್
ಬೆಂಗಳೂರು: ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬಯಲಿಗೆ ಬಂದ ಗೃಹಲಕ್ಷ್ಮಿ ಹಗರಣಕ್ಕೆ ಇನ್ನೂ ಉತ್ತರ ಬಂದಿಲ್ಲ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಪಾವತಿ ಆಗಬೇಕಾಗಿದ್ದ ₹5,000 ಕೋಟಿ ಗೃಹಲಕ್ಷ್ಮಿ ಹಣ ಏನಾಯ್ತು? ಯಾವಾಗ ಬಿಡುಗಡೆ ಆಗುತ್ತೆ? ಎನ್ನುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಗದಿರುವಾಗಲೇ ಈಗ ಅನ್ನಭಾಗ್ಯದ ಹಣದಲ್ಲೂ ಭ್ರಷ್ಟಾಚಾರ ನಡೆದಿರುವ ವಾಸನೆ ಬರುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಕಳೆದ ವರ್ಷ ಜನವರಿಯಲ್ಲಿ ಅಕ್ಕಿಯೂ ಕೊಟ್ಟಿಲ್ಲ, ಅಕ್ಕಿಗೆ ಮೀಸಲಿಟ್ಟಿದ್ದ ₹657 ಕೋಟಿ ಹಣದ ಲೆಕ್ಕವೂ ಸಿಕ್ಕುತ್ತಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ, ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯದ ಇಲಾಖೆಯೂ ಇಲ್ಲ, ಲೂಟಿ ಹೊಡೆಯದ ಸಚಿವರೂ ಇಲ್ಲ ಎಂದು ಹೇಳಿದ್ದಾರೆ.

ಕಮಿಷನ್ ದಂಧೆಯಿಂದ ಬೇಸತ್ತು ಮದ್ಯ ಮಾರಾಟಗಾರರ ಸಂಘ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬೆನ್ನಲ್ಲೇ ಈಗ ಗುತ್ತಿಗೆದಾರರ ಸಂಘ ಮತ್ತೊಮ್ಮೆ ಮುಖ್ಯಮಂತಿರ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು ಮಾರ್ಚ್ 5 ರೊಳಗೆ ಬಾಕಿ ಇರುವ ₹34,370 ಕೋಟಿ ರೂಪಾಯಿ ಬಿಲ್ ಪಾವತಿ ಆಗದಿದ್ದರೆ ಕಾಮಗಾರಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಈ ಕೂಡಲೇ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು.
ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ತೆರಿಗೆ ಹಣದಲ್ಲಿ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ವಿಬಿ ಜಿ ರಾಮ್ ಜಿ ಯೋಜನೆಯ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದೆ.
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆಯ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಬಹುದು. ಕಾಯ್ದೆ ಜಾರಿಯ ನಂತರ ಅದನ್ನು ಹೀಗೆ ಟೀಕೆ ಮಾಡುವ ನೈತಿಕತೆ ಇರುವುದಿಲ್ಲ. ಇದರಲ್ಲಿ ಮಹಾತ್ಮ ಗಾಂಧೀಜಿಯ ಪಾತ್ರವಿಲ್ಲದಿದ್ದರೂ, ಅವರ ಚಿತ್ರ ಬಳಸಿ ಜಾಹೀರಾತಿನಲ್ಲಿ ಅವರೇ ಮಾತನಾಡುವಂತೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ರಚಿಸಿದ್ದು, ಇನ್ನು ರದ್ದು ಮಾಡಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇನ್ನು ಮುಂದೆ ಮನೆಹಾಳು ಕಾಂಗ್ರೆಸ್ಸಿಗರು ಬರಲಿದ್ದಾರೆ ಎಂದು ಅವರಿಗೆ ಮೊದಲೇ ಗೊತ್ತಿತ್ತು ಎಂದರು.
ಉದ್ಯೋಗ ಖಾತರಿ ಯೋಜನೆಯಲ್ಲಿ ಕಾಂಗ್ರೆಸ್ ಮುಖಂಡರು ಲೂಟಿ ಮಾಡಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಇದರಲ್ಲಿ ಲೂಟಿ ನಡೆಯುತ್ತಿದೆ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಅದನ್ನೇ ಹೇಳಿದ್ದರು. ಸಾವಿರಾರು ಕೋಟಿ ರೂ. ಬೋಗಸ್ ಬಿಲ್ ಮಾಡಿ ಲೂಟಿ ಮಾಡಿದ್ದಾರೆ ಎಂದು ಸಿಎಜಿ ವರದಿಯಲ್ಲೂ ಇದೆ. ಇದನ್ನು ತಡೆಯಲು ಪಾರದರ್ಶಕವಾದ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರಾಹುಲ್ ಗಾಂಧಿ ಮಾತು ಕೇಳಿಕೊಂಡು ಜಾಹೀರಾತು ಪ್ರಕಟಿಸಿದೆ. ಜಾಹೀರಾತಿನಲ್ಲಿರುವ ಮಾತುಗಳನ್ನು ಗಾಂಧೀಜಿ ಎಂದೂ ಹೇಳಿಲ್ಲ. ಅದನ್ನು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಗಾಂಧೀಜಿಗೂ ಅಪಮಾನ ಮಾಡಲಾಗಿದೆ ಎಂದು ದೂರಿದರು.
ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಪ್ರಕಟ ಮಾಡಿದರೆ ಅದು ದೊಡ್ಡ ತಪ್ಪು. ಗಾಂಧೀಜಿ ಚಿತ್ರ ಬಳಸಲು ಅವರ ಕುಟುಂಬದವರು ಅಧಿಕಾರ ನೀಡಿಲ್ಲ. ಕಾನೂನು ಪ್ರಕಾರ ಗಾಂಧೀಜಿಯ ಚಿತ್ರ ಬಳಸಲು ಅವಕಾಶವೇ ಇಲ್ಲ. ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಮೋಜು ಮಸ್ತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸಿ ಹೋರಾಟ ಮಾಡುತ್ತದೆ ಎಂದರು.












Click it and Unblock the Notifications