'ದಿಟ್ಟತನ ತೋರಲು ರಾಜ್ಯ ಸರ್ಕಾರಕ್ಕೆ ಇದು ಸಕಾಲ'

Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್, 19: ಯಾವ ಕಾರಣಕ್ಕೂ ಕಾವೇರಿ ಮೇಲುಸ್ತುವಾರಿ ಸಮಿತಿ ನೀಡಿರುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ತಲೆಬಾಗಬಾರದು. ಸಿಎಂ ಸಿದ್ದರಾಮಯ್ಯ ನೀರು ಬಿಡುಗಡೆ ಆದೇಶ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ಮೇಲುಸ್ತುವಾರಿ ಸಮಿತಿ ಸೋಮವಾರ (ಸೆ.19) ಆದೇಶ ನೀಡಿದೆ. ಆದರೆ ಇದನ್ನು ರಾಜ್ಯ ಸರ್ಕಾರ ಮಾನ್ಯ ಮಾಡಬಾರದು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.[ಸೆ. 21ರಿಂದ 30ರ ವರೆಗೆ ಕಾವೇರಿ ನೀರು ಬಿಡಿ: ಶಶಿಶೇಖರ್]

Karnataka Government make House plan sanction easy

ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುವ ರೈತ ಪರವಾದ ನಿರ್ಧಾರಕ್ಕೆ ಇಡೀ ರಾಜ್ಯ ಬದ್ಧವಾಗಿರುತ್ತದೆ. ವಿಪಕ್ಷಗಳು ಸಹ ಸಹಮತ ನೀಡುತ್ತವೆ. ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಮೇಲುಸ್ತುವಾರಿ ಸಮಿತಿಯ ತೀರ್ಮಾನವನ್ನು ಒಪ್ಪಿಕೊಳ್ಳಬಾರದು ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.[ಸುಪ್ರೀಂಕೋರ್ಟ್ ವಿಚಾರಣೆಗೆ ಸಮಿತಿ ತೀರ್ಮಾನವೇ ಮುನ್ನುಡಿ?]

ಇದು ಸಂಪೂರ್ಣ ಅವೈಜ್ಞಾನಿಕ ತೀರ್ಪಾಗಿದ್ದು ನಮ್ಮ ಬಳಿ ನೀರು ಇದ್ದರೆ ತಾನೆ ಬಿಡಲು ಸಾಧ್ಯ, ಇದನ್ನು ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಬಿ ಎಸ್ ವೈ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka State Government and CM Siddaramaiah should not accept The Cauvery Waters Supervisory Committee direction, said by Karnataka State BJP President B.S. Yeddyurappa.
Please Wait while comments are loading...