ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಕಾಯ್ದೆ ಜಾರಿಗೆ ಬಂದರೆ, ಕಾಮೆಡ್-ಕೆ ರದ್ದು?

|
Google Oneindia Kannada News

ಬೆಂಗಳೂರು. 20 : ಕರ್ನಾಟಕ ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತಂದು 2015-16ನೇ ಸಾಲಿನಿಂದ ಜಾರಿಗೊಳಿಸಲು ಸಿದ್ಧತೆ ಆರಂಭಿಸಿದೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೊಳಿಸಬೇಕಾದರೆ ಕಾಮೆಡ್‌-ಕೆ ಪರೀಕ್ಷೆಯನ್ನು ರದ್ದುಗೊಳಿಸಿ ಎಂದು ವಿದ್ಯಾರ್ಥಿ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.

ಡಿ.9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ರ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. [ಸಿಇಟಿ ಕಾಯ್ದೆ ಯಾರಿಗೆ ಲಾಭ? ಯಾರಿಗೆ ನಷ್ಟ?]

CET act

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶಪಾಂಡೆ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ ನಡೆಸಿ ಈ ಬಗ್ಗೆ ಅವರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದ್ದಾರೆ. [ಸಿಇಟಿ ಗೊಂದಲಕ್ಕೆ ತೆರೆಎಳೆದ ಸಿಎಂ ಸಿದ್ದರಾಮಯ್ಯ]

ಕಳೆದ ವರ್ಷ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರಲು ಸರ್ಕಾರ ಮುಂದಾಗಿತ್ತು. ಆಗ ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರಿಂದ ತನ್ನ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆದಿತ್ತು. ಸದ್ಯ, ಕಾಯ್ದೆಗೆ ಕೆಲವೊಂದು ತಿದ್ದುಪಡಿ ತಂದು ಜಾರಿಗೊಳಿಸಲು ಮುಂದಾಗಿದೆ.

2006ರ ಕಾಯ್ದೆಯನ್ನು ಜಾರಿಗೆ ತರುವುದಾದದರೆ ಕರ್ನಾಟಕ ಖಾಸಗಿ ಇಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್‌-ಕೆ)ಯನ್ನು ರದ್ದುಮಾಡಿ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರಮುಖರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾಮೆಡ್‌ ಕೆ ಪರೀಕ್ಷೆ ಮೂಲಕ ಭರ್ತಿ ಮಾಡುವ ವೃತ್ತಿಪರ ಸೀಟುಗಳನ್ನೂ ಸಿಇಟಿ ಮೂಲಕವೇ ಭರ್ತಿ ಮಾಡಿ ಎಂದು ಹೇಳಿರುವ ವಿದ್ಯಾರ್ಥಿಗಳು ಕಾಯ್ದೆಗೆ ತಿದ್ದುಪಡಿ ತಂದರೂ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳು ಕಡಿಮೆಯಾಗಬಾರದು ಎಂದು ಒತ್ತಾಯಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶಪಾಂಡೆ ಅವರು,ಈ ಬಗ್ಗೆ ಖಾಸಗಿ ಕಾಲೇಜುಗಳೊಂದಿಗೆ ಮಾತುಕತೆ ನಡೆಸಿ ನಂತರ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರುವ ಪ್ರಯತ್ನವಂತೂ ನಡೆಯುತ್ತಿದೆ.

English summary
Karnataka government is planning to implement the Karnataka Professional Education Regulation (Regulation of Admissions and Determination of Fee) Act of 2006, from 2015, government seeks suggestions from the students and officials to amend the act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X