ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧರಾದ ಎಚ್.ಡಿ.ಕುಮಾರಸ್ವಾಮಿ

Recommended Video

      ಎಚ್ ಡಿ ಕುಮಾರಸ್ವಾಮಿ ಮತ್ತೊಂದು ಸಾಲ ಮನ್ನಾಕ್ಕೆ ಸಿದ್ದ | Oneindia Kannada

      ಬೆಂಗಳೂರು, ಅಕ್ಟೋಬರ್ 21 : ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗುತ್ತಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ.

      ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವ ಕುರಿತು ಮಾಹಿತಿ ಸಂಗ್ರಹ ಮಾಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಆದ್ದರಿಂದ, ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ.

      ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರಿಂದ ರಾಜ್ಯ ಸರ್ಕಾರ ಮಾಹಿತಿ ಕೇಳಿದೆ. ಶೈಕ್ಷಣಿಕ ಸಾಲದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಹ ಮಾಹಿತಿ ನೀಡಿಲಿದೆ. ಸಾಲ ಮನ್ನಾ ಮಾಡುವ ಮೂಲಕ ಯುವ ಜನರ ಬೆಂಬಲಗಳಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.

      Karnataka government may waiver the education loan

      ರಾಷ್ಟ್ರೀಕೃತ ಬ್ಯಾಂಕ್‌ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ವಿದ್ಯಾರ್ಥಿಗಳು ಮಾಡಿರುವ ಶೈಕ್ಷಣಿಕ ಸಾಲ ಮನ್ನಾ ಆಗಲಿದೆ ಎಂಬುದು ಸದ್ಯದ ಮಾಹಿತಿ. ಇದಕ್ಕಾಗಿ ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

      ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸುಮಾರು 45 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ. ಈಗ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಉಳಿದ ವರ್ಗದ ವಿದ್ಯಾರ್ಥಿಗಳ ಕಥೆ ಏನು? ಎಂಬುದು ಇನ್ನೂ ಕಾದು ನೋಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+