BREAKING: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಡಿಸೆಂಬರ್‌ 14: ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಮಹತ್ವದ ಆದೇಶವನ್ನ ಹೊರಡಿಸಿದೆ.

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.

Karnataka Government Merges Food Safety and Drug Control Department

ಬಳ್ಳಾರಿ ಘಟನೆಯ ನಂತರ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ಕರ್ನಾಟಕ ಸರ್ಕಾರವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ "ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ" ಎಂದು ಹೊಸದಾಗಿ ನಾಮಕಾರಣ ಮಾಡಿದೆ. ಎರಡೂ ಇಲಾಖೆಗಳ ಕಾರ್ಯಗಳು ಹೋಲುವುದರಿಂದ ಈ ವಿಲೀನ ಸೂಕ್ತ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಆಹಾರ ಸುರಕ್ಷತೆ ಗುಣಮಟ್ಟ ಮತ್ತು ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದು, ಈ ಪ್ರಕರಣದಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಗೊಳ್ಳುವಂತೆ ಮಾಡಿತ್ತು. ಹೀಗಾಗಿ, ಡಿಸೆಂಬರ್​ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ರಾಜ್ಯ ಸರ್ಕಾರವೂ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+