ಬಿಗ್ ನ್ಯೂಸ್; ಸರ್ಕಾರಿ ಕ್ವಾರಂಟೈನ್ ನಿಯಮ ಬದಲಿಸಿದ ಕರ್ನಾಟಕ

ಬೆಂಗಳೂರು, ಮೇ 25 : ಕರ್ನಾಟಕ ಸರ್ಕಾರ ಕ್ವಾರಂಟೈನ್‌ ನಿಯಮದಲ್ಲಿ ಮತ್ತೆ ಬದಲಾವಣೆ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ಸರ್ಕಾರಿ ಕ್ವಾರಂಟೈನ್‌ಗೆ ಒಳಗಾಗದೇ ಮನೆಗೆ ತೆರಳಿದ್ದರು. ಅಲ್ಲಿಂದ ವಿಧಾನಸೌಧಕ್ಕೆ ಆಗಮಿಸಿದ ಸಭೆ ನಡೆಸಿದ್ದರು. ಈ ಬಗ್ಗೆ ಭಾರಿ ಚರ್ಚೆ ನಡೆದಿತ್ತು.

ದೇಶಿಯ ವಿಮಾನ ಸಂಚಾರ ಆರಂಭವಾಗಿದ್ದು, ಹಲವು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕ್ವಾರಂಟೈನ್ ನಿಯಮದ ಬಗ್ಗೆ ಅಪಸ್ವರ ಎತ್ತಿದ್ದರು. ಆದ್ದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

Karnataka Government New SOP For Inter State Passengers

ಕೆಲಸದ ಮೇಲೆ ಆಗಮಿಸುವ ಕೇಂದ್ರ ಸಚಿವರು ಕ್ವಾರಂಟೈನ್‌ಗೆ ಒಳಗಾಗಬೇಕಿಲ್ಲ. ರಾಜ್ಯ ಸಚಿವರು, ಕೋವಿಡ್ - 19 ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ದೇಶಿಯ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸುವ ಜನರು ಐಸಿಎಂಆರ್ ಮಾನ್ಯತೆ ಪಡೆದ ಲ್ಯಾಬ್‌ನಿಂದ ಎರಡು ದಿನದ ಹಿಂದಿನ ಕೋವಿಡ್ - 19 ಪರೀಕ್ಷೆ ನೆಗೆಟೀವ್ ವರದಿ ಪಡೆದಿದ್ದರೆ ಸರ್ಕಾರಿ ಕ್ವಾರಂಟೈನ್‌ನಲ್ಲಿ ಇರಬೇಕಾದ ಅಗತ್ಯವಿಲ್ಲ. ಹೋಂ ಕ್ವಾರಂಟೈನ್‌ಗೆ ಹೋಗಬಹುದು ಎಂದು ನಿಯಮ ಬದಲಾವಣೆ ಮಾಡಲಾಗಿದೆ.

ವಿಮಾನದಲ್ಲಿ ಆಗಮಿಸಿದ ಎಲ್ಲಾ ಅಂತರರಾಜ್ಯ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಹಲವು ಪ್ರಯಾಣಿಕರು ಈ ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+