Government Employees: ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ಬಗ್ಗೆ ಬಿಗ್ ಅಪ್‌ಡೇಟ್
ಬೆಂಗಳೂರು,ಜೂನ್ 19: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದ್ದು, ಸರ್ಕಾರಿ ನೌಕರರ ವರ್ಗಾವಣೆ ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರತಿಭಾ. ಕೆ ಅವರು ಇಂದು (ಜೂನ್ 17) ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ನೌಕರರರು ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಆದ್ರೆ, ಇದೀಗ ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಈ ಹಿಂದೆ ಆದೇಶಿಸಲಾಗಿತ್ತು. ಈ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಇದೀಗ ಆದೇಶ ಹೊರಡಿಸುವ ಮೂಲಕ ಸರ್ಕಾರಿ ನೌಕರಿಗೆ ಗುಡ್ ನ್ಯೂಸ್ ನೀಡಿದೆ.
2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಗ್ರೂಪ್ ಎ, ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಸಚಿವರಿಗೆ ಹಾಗೂ ಗ್ರೂಪ್ ಸಿ ಮತ್ತ ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಎ ಮತ್ತು ಬಿ ವೃಂದದ ಹುದ್ದೆಗಳಲ್ಲಿ 2 ವರ್ಷ, ಸಿ ವೃಂದದ ಹುದ್ದೆಯಲ್ಲಿ ವರ್ಷ ಹಾಗೂ ಡಿ ಗ್ರೂಪ್ ಹುದ್ದೆಗಳಲ್ಲಿ 7 ವರ್ಷ ಪೂರ್ಣಗೊಳಿಸಿದವರನ್ನ ವರ್ಗಾವಣೆ ಮಾಡಬಹುದಾಗಿದೆ.
ಎ ಮತ್ತು ಬಿ ಗ್ರೂಪ್ ಅಧಿಕಾರಿಗಳಿಗೆ ಸಂಬಂಧಿಸಿದ ವರ್ಗಾವಣೆ ಪ್ರಸ್ತಾವನೆಯನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು. ಇತ್ತ ಹೈದರಾಬಾದ್ ಕರ್ನಾಟಕ ಪ್ರದೇಶದ ಕಚೇರಿಗಳಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಂಡ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂಬುವುದನ್ನು ಗೈಡ್ ಲೈನ್ಸ್ ನಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications