Karnataka Government: ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ ನಿಗದಿ: ಸರ್ಕಾರ ಆದೇಶ

ಬೆಂಗಳೂರು, ಮಾರ್ಚ್‌ 07: ಕರ್ನಾಟಕ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಆಶಾ ಕಾರ್ಯಕರ್ತೆಯರ ಆಯ್ಕೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು, ನಿವೃತ್ತಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದಂತ ಸಾಮಾಜಿ ಆರೋಗ್ಯ ಕಾರ್ಯಕರ್ತೆಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿರುವಂತ ಆಶಾ ಕಾರ್ಯಕರ್ತೆಯರು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯಾಧ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ತಂತ್ರಜ್ಞಾನ ಇತ್ಯಾದಿಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿ ನಿವೃತ್ತಿಯ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

Karnataka Government Orders Fixing Retirement Age Of Asha Workers At 60 Years

ವೆನ್ ಲಾಕ್ ಹಾಗೂ ಲೇಡಿ ಗೋಶನ್ ಆಸ್ಪತ್ರೆಗಳನ್ನು ಅಭಿವೃದ್ಧಿ

ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಮಂಗಳೂರಿನ ವೆನ್ ಲಾಕ್ ಹಾಗೂ ಲೇಡಿ ಗೋಶನ್ ಆಸ್ಪತ್ರೆಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಗುರುವಾರ ವಿಧಾನಪರಿಷತ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ'ಸೋಜಾ, ಇವರು ನಿಯಮ 72 ರಡಿ ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆ ಮತ್ತು ಲೇಡಿಗೋಶನ್ ಆಸ್ಪತ್ರೆಗಳನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕುರಿತು, ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದರು.

ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ IPHS ಮಾನದಂಡಗಳಂತೆ ಹಾಗೂ ಅಗತ್ಯಕ್ಕೆ ತಕ್ಕಂತೆ ಸರ್ಕಾರವು ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುತ್ತಾ ಬಂದಿದೆ ಪ್ರಸ್ತುತ ಈ ಆಸ್ಪತ್ರೆಯು 905 ಹಾಸಿಗೆಗಳ ಸಾಮರ್ಥ್ಯ ಹಾಗೂ ಲೇಡಿಗೋಷನ್ ಆಸ್ಪತ್ರೆಯು 272 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. ಮುಂದುವರೆದು 50 ಬೆಡ್ ಗಳ Critical care block ಮಂಜೂರಾಗಿದ್ದು, ಕಟ್ಟಡ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಲೇಡಿಗೋಶನ್ ಆಸ್ಪತ್ರೆ ಹರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಸ್ವತಂತ್ರವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.

ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯು ಖಾಸಗಿ ಸಹಭಾಗಿತ್ವದಲ್ಲಿ ಕೆ.ಎಂ.ಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ಸೇವೆಯನ್ನು ನೀಡಲಾಗುತ್ತಿದೆ ಹಾಗೂ ಅದರ ವತಿಯಿಂದ ಕ್ಯಾಥ್ ಲ್ಯಾಬ್ ನಿರ್ಮಾಣ ಮಾಡಲಾಗುತ್ತಿದೆ. ಎಂದರು.

ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದಲ್ಲಿ 10Modular OT ಗಳು ಮತ್ತು 180 ಬೆಡ್‌ ಗಳಿರುವ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡ ನಿರ್ಮಾಣಗೊಂಡಿದ್ದು. ಈ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವಿಭಾಗವು ನೆಪ್ರೊಪ್ಲಸ್ ಸಂಸ್ಥೆಯ ವತಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, 235 ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಅಲ್ಲದೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 200 ಹಾಸಿಗೆಗಳ ಸಾಮರ್ಥ್ಯದ ರೀಜನಲ್ ಅಡ್ವಾನ್ಸ್ಡ್ ಪೀಡಿಯಾಟ್ರಿಕ್ ಕೇರ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳಿಗೆ ಉನ್ನತ ಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+