ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಭರ್ಜರಿ ಸಿದ್ಧತೆ... ಸಿಎಂ ಹೇಳಿದ್ದೇನು?
ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮದ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಸಮಿತಿ ಸಭೆ ನಡೆಯಿತು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸಿಎಂ ಸೂಚನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿ.ಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು. ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ ಮಾಡಲಾಗುವುದು. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದಾರೆ.

ಕಣಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆಯಾಗಲಿದೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು. ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ.
ಅಟನ್ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನಿಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಿದೆ. ಡಿಸೆಂಬರ್ 26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.

ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ಮಾಡಲಿದ್ದು, ವರ್ಷವಿಡೀ ಎಲ್ಲ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ ಮಾಡಲಿದೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು, ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲ ಶಾಲೆಗಳಲ್ಲಿ ವಿತರಣೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications