BPL Card: ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಶುಭಸುದ್ದಿ..
BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಈ ನಡುವೆಯೇ ಇದೀಗ ಗುಡ್ ನ್ಯೂಸ್‌ವೊಂದನ್ನು ನೀಡಲು ರಾಜ್ಯ ಸರ್ಕಾರ ಯೋಜನೆಗೆ ಮುಂದಾಗಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅನರ್ಹರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡು ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಆಹಾರ ಇಲಾಖೆ ಮುಂದುವರೆಸಿದೆ. ಈ ನಡುವೆಯೇ ಸರ್ಕಾರ ಗುಡ್ ನ್ಯೂಸ್ ನೀಡುವ ಚಿಂತನೆಯೊಂದನ್ನು ನಡೆಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳ ಅರ್ಹತಾ ಮಾನದಂಡಗಳನ್ನು ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಪ್ರಸ್ತುತ 1.2 ಲಕ್ಷ ರೂಪಾಯಿಗಳ ವಾರ್ಷಿಕ ಆದಾಯ ಮಿತಿಯನ್ನು ಹಣದುಬ್ಬರಕ್ಕೆ ಅನುಗುಣವಾಗಿ ಪರಿಷ್ಕರಣೆ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ಪಡಿತರ ಚೀಟಿಗಳ ವಿತರಣೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡುತ್ತದೆ. ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸುವುದು ಸರ್ಕಾರದ ಪರಿಶೀಲನೆಯಲ್ಲಿ ಇದೆ. ಈ ವಿಷಯದಲ್ಲಿ ಅಗತ್ಯ ಇರುವ ಕ್ರಮ ಕೈಗೊಳ್ಳುತ್ತೇವೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತ 5 ಕೆ.ಜಿ ಅಕ್ಕಿ ಜೊತೆಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಬೇಳೆ ಕಾಳುಗಳು, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪನ್ನು ವಿತರಣೆ ಮಾಡಲು ಎರಡು ತಿಂಗಳೊಳಗೆ ಟೆಂಡರ್ ಕರೆಯಲಾಗುವುದು. ಸಿಎಂ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ ಎಂದು ಹೇಳಿದರು.
ದುರುಪಯೋಗ ಆಗುತ್ತಿರುವುದಕ್ಕೆ ಕಡಿವಾಣ ಹಾಕಲು ಅಕ್ಕಿಯ ಜೊತೆಗೆ ಬೇಳೆ ಕಾಳುಗಳು ಮತ್ತು ಅಡುಗೆ ಎಣ್ಣೆ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಪಡಿತರ ಚೀಟಿ ಹೊಂದಿರುವವರು ಸಮೀಕ್ಷೆಯು ಸುಮಾರು ಶೇಕಡ 90ರಷ್ಟು ಜನರು ಬೇಳೆಕಾಳುಗಳು ಮತ್ತು ಅಡುಗೆ ಎಣ್ಣೆ ಕೊಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಬಹಿರಂಗಗೊಳಿಸಿದೆ ಎಂದು ಹೇಳಿದರು.
ವುದೇ ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವುದಿಲ್ಲ. ಆದರೆ, ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಿದರು. ಇನ್ನು ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ತೆಗೆಯುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು. 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯ ಅಡಿಯಲ್ಲಿ ಬರುವ ಫಲಾನುಭವಿಗಳಿಗೆ ರೇಷನ್ ಕಾರ್ಡ್‌ಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಭರವಸೆ ಕೊಟ್ಟರು.
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕೆಂಬ ಮಾನದಂಡದಿಂದಾಗಿ, ಖಾಸಗಿ ಕಂಪನಿಗಳಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರು ತಿಂಗಳಿಗೆ 16,000 ರೂಪಾಯಿ ಸಂಬಳ ಪಡೆದರೂ, 4 ಲಕ್ಷ ರೂಪಾಯಿಗಿಂತ ಅಧಿಕ ಆದಾಯ ಹೊಂದಿರುವುದರಿಂದ ಬಿಪಿಎಲ್ ಕಾರ್ಡ್ ಪಡೆಯಲು ಸಾಧ್ಯ ಆಗುತ್ತಿಲ್ಲ. ಆದ್ದರಿಂದ ಈಗಿನ ಹಣದುಬ್ಬರಕ್ಕೆ ತಕ್ಕಂತೆ ಆದಾಯ ಮಿತಿಯಲ್ಲಿ ಬದಲಾವಣೆ ಮಾಡಬೇಕು ಎನ್ನುವ ಕೂಗುಗಳು ಜೋರಾಗಿ ಕೇಳಿಬಂದುತ್ತಿವೆ. ಈ ಹಿನ್ನೆಲೆ ಈ ಚಿಂತನೆಯನ್ನು ನಡೆಸಲಾಗಿದೆ ಎನ್ನಲಾಗುತ್ತಿದೆ.












Click it and Unblock the Notifications