ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಇಲಾಖೆಯು ಭರ್ಜರಿ ಸಿಹಿ ಸುದ್ದಿಯನ್ನ ನೀಡಿದೆ. ಇನ್ನು ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡುವಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ಎನ್ನುವಂತೆ ಇನ್ನುಂದೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ರಜೆ ಕೋರಿ ದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿ ಖಚಿತಪಡಿಸಿ ಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮ ಆಚರಿಸುವುದು ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ವೇತನಗೊಳ್ಳಲು, ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನಕ್ಕೆ ಸಹಾಯವಾಗುತ್ತದೆ. ಇದರಿಂದ ಮನೋಬಲವೃದ್ಧಿಯಾಗಿ, ಒತ್ತಡ ಕಡಿಮೆ ಯಾಗುತ್ತದೆ ಎಂದು ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.
ಈ ಕುರಿತಂತೆ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.
ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ.












Click it and Unblock the Notifications